ಶಿಮ್ಲಾ.ಆಗಸ್ಟ್.8: ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಜನರು ಸಜೀವವಾಗಿ ದಹನಗೊಂಡರೆ, 11 ಕ್ಕೂ ಹೆಚ್ಚು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ತೀಸ್ಸಾ-ಬೈರಾಗಢ್ ರಸ್ತೆಯ ಚಲುಜ್ ಮೋಡ್ ಬಳಿ ಖಾಸಗಿ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದ್ದರಿಂದ ಈ ದುರಂತ ಸಂಭವಿಸಿದೆ.
ಅಪಘಾತದ ಸಮಯದಲ್ಲಿ ಬಸ್‌ನಲ್ಲಿ ಸುಮಾರು 15 ರಿಂದ 20 ಪ್ರಯಾಣಿಕರು ಪ್ರಯಾಣಿಸುತ್ತಿದ್ದರೆಂದು ತಿಳಿದುಬಂದಿದೆ. ಬಸ್ ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದಾಗ ಈ ಅನಾಹುತ ಸಂಭವಿಸಿದೆ.

ಮೃತಪಟ್ಟ ಏಳು ಜನರಲ್ಲಿ ನಾಲ್ಕರು ಪುರುಷರು ಮತ್ತು ಮೂವರು ಮಹಿಳೆಯರಿದ್ದಾರೆ. ಬಸ್ ಚಾಲಕ ಹಾಗೂ ನಿರ್ವಾಹಕ ಕೂಡ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳೀಯ ನಿವಾಸಿಗಳು ಮತ್ತು ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಸಮೀಪದ ತೀಸ್ಸಾ ನಾಗರಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತಕ್ಕೆ ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ತೀಸ್ಸಾ ಪೊಲೀಸ್ ಠಾಣೆಯ ಹೆಚ್ಚುವರಿ ಎಸ್‌ಎಚ್‌ಒ ಅನುಭವ್ ಶರ್ಮಾ ಅವರು ಘಟನೆಯನ್ನು ದೃಢಪಡಿಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.










