Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಇಂದು ಸಂಜೆಯೇ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ಸಾಧ್ಯತೆ

---Advertisement---

ಬೆಂಗಳೂರು :ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರ ಖಾತೆ ಹಂಚಿಕೆಯನ್ನು ಕೇಂದ್ರವಾಗಿಟ್ಟುಕೊಂಡು ಉಂಟಾಗಿದ್ದ ಅಸಮಾಧಾನ ಇದೀಗ ಶಮನವಾಗುವ ಲಕ್ಷಣಗಳು ಕಾಣಿಸುತ್ತಿವೆ. ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಚ್ಚರಿ ಮೂಡಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ ತಮ್ಮ ನಿರ್ಧಾರವನ್ನು ಹಿಂಪಡೆಯುವ ಸಾಧ್ಯತೆಗಳು ಹೆಚ್ಚಾಗಿವೆ.

ರಾಮಲಿಂಗಾರೆಡ್ಡಿ ಅವರು ನನ್ನ ಸ್ನೇಹಿತರು, ಅವರೊಂದಿಗೆ ಮಾತನಾಡಿದ್ದು, ಎಲ್ಲಾ ಸಮಸ್ಯೆ ಬಗೆಹರಿಸಲಾಗಿದೆ. ಯಾವುದೇ ಕಾರಣಕ್ಕೂ ಅವರ ರಾಜಿನಾಮೆ ಅಂಗೀಕರಿಸುವುದಿಲ್ಲ. ಅನಗತ್ಯವಾಗಿ ತಲೆಕೆಡಿಸಿಕೊಂಡು ಏನೇನೋ ಸ್ಟೋರಿ ಮಾಡಬೇಡಿ. ಅವರು ರಾಜಿನಾಮೆಯನ್ನು ವಾಟ್ಸಪ್ ನಲ್ಲಿ ಕಳಿಸಿಕೊಟ್ಟಿದ್ದು ನಿಜ. ಈಗ ಆ ವಿಚಾರ ಬಗೆಹರಿಸಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸುರ್ಜೇವಾಲ ಮಧ್ಯಸ್ಥಿಕೆ ಬಳಿಕ ಬದಲಾದ ವಾತಾವರಣ

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಮಧ್ಯಪ್ರವೇಶದ ಬಳಿಕ ಬೆಳವಣಿಗೆಗಳು ವೇಗ ಪಡೆದುಕೊಂಡಿವೆ. ಖಾತೆ ಹಂಚಿಕೆ ವಿಚಾರವಾಗಿ ಉಂಟಾಗಿದ್ದ ಗೊಂದಲ ನಿವಾರಣೆಗೆ ಅವರು ಸ್ವತಃ ಮುಂದಾಗಿ ಮಾತುಕತೆ ನಡೆಸಿದ್ದು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಿದ್ದಾರೆ.

ಇದೇ ವೇಳೆ ಸಚಿವ ಸತೀಶ್ ಜಾರಕಿಹೊಳಿ ಅವರು ಅಸಮಾಧಾನಗೊಂಡಿರುವ ರಾಮಲಿಂಗಾ ರೆಡ್ಡಿ ಹಾಗೂ ಮುನಿಯಪ್ಪ ಅವರ ಪರವಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿದುಬಂದಿದೆ.

Join WhatsApp

Join Now

Join Telegram

Join Now