ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರ ಸಚಿವ ಸ್ಥಾನ ರಾಜೀನಾಮೆ ವಿವಾದಕ್ಕೆ ಕೊನೆಗೂ ತೆರೆ ಬಿದ್ದಿದೆ. ಹಲವು ಸುತ್ತಿನ ಮಾತುಕತೆ ಹಾಗೂ ಸಮಾಲೋಚನೆಗಳ ಬಳಿಕ ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದು, ಸಚಿವ ಸಂಪುಟದಲ್ಲೇ ಮುಂದುವರಿಯಲು ಒಪ್ಪಿಗೆ ಸೂಚಿಸಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟನೆ ನೀಡಿದ್ದರೆ.
ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ನಡೆದ ಮಹತ್ವದ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ರಾಮಲಿಂಗಾರೆಡ್ಡಿ ಹಾಗೂ ಸಚಿವ ಕೃಷ್ಣ ಭೈರೇಗೌಡ ಭಾಗವಹಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಚರ್ಚೆಯಲ್ಲಿ ಉಂಟಾಗಿದ್ದ ಭಿನ್ನಾಭಿಪ್ರಾಯಗಳ ಬಗ್ಗೆ ಸವಿಸ್ತಾರವಾಗಿ ಮಾತುಕತೆ ನಡೆಸಲಾಯಿತು.
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ರಾಮಲಿಂಗಾರೆಡ್ಡಿ ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿರುವುದಾಗಿ ಸ್ಪಷ್ಟಪಡಿಸಿದರು. ಜೊತೆಗೆ ಅವರು ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯ ಪಾತ್ರವಹಿಸಲಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








