Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

Breaking news | ಚಿತ್ರದುರ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್. ನೇಮಕ

---Advertisement---

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್‌. 31 : ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಪ್ರಕ್ರಿಯೆಯ ಭಾಗವಾಗಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ಹೊರಡಿಸಿದೆ. ಇದರನ್ವಯ ಚಿತ್ರದುರ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್., IAS ಅವರನ್ನು ನೇಮಕ ಮಾಡಲಾಗಿದೆ.

​ಈ ಹಿಂದೆ ಬೆಂಗಳೂರಿನ ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ 2013ರ ಬ್ಯಾಚ್‌ ನ ಐಎಎಸ್ ಅಧಿಕಾರಿ ರಮ್ಯಾ ಎಸ್. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಚಿತ್ರದುರ್ಗ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
​ಚಿತ್ರದುರ್ಗದ ಜಿಲ್ಲಾಧಿಕಾರಿಯಾಗಿದ್ದ ವೆಂಕಟೇಶ್ ಟಿ., IAS ಅವರನ್ನು ವರ್ಗಾವಣೆಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ರಮ್ಯಾ ಎಸ್. ಅವರನ್ನು ನಿಯೋಜಿಸಲಾಗಿದೆ.

ಈ ಹಿಂದೆ ಜುಲೈ 03 ರಂದು ಚಿತ್ರದುರ್ಗ ಜಿಲ್ಲಾಧಿಕಾರಿ ವರ್ಗಾವಣೆ ಆದೇಶ ನೀಡಲಾಗಿತ್ತು. ಆದರೆ ವರ್ಗಾವಣೆ ಆದೇಶ ಹೊರಬಿದ್ದ ಕೆಲವೇ ಗಂಟೆಗಳಲ್ಲಿ ಅದಕ್ಕೆ ತಾತ್ಕಾಲಿಕ ತಡೆ ನೀಡಲಾಗಿತ್ತು.

ಚಿತ್ರದುರ್ಗದ ಪ್ರಸ್ತುತ ಡಿಸಿಯಾಗಿದ್ದ ವೆಂಕಟೇಶ್ ಟಿ. ಅವರ ಸ್ಥಾನಕ್ಕೆ, ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಮ್ಯಾ ಎಸ್. ಅವರನ್ನು ವರ್ಗಾವಣೆ ಮಾಡಿ ಶುಕ್ರವಾರ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿತ್ತು.

ಆದರೆ ರಾಜ್ಯದಲ್ಲಿ ಸದ್ಯ ಎಸ್ ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆ ಚಾಲ್ತಿಯಲ್ಲಿತ್ತು. ನಿಯಮಗಳ ಪ್ರಕಾರ, ಇಂತಹ ಸಂದರ್ಭದಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಯ ಜವಾಬ್ದಾರಿ ಹೊತ್ತಿರುವ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡುವ ಮುನ್ನ ಕೇಂದ್ರ ಚುನಾವಣಾ ಆಯೋಗದ ಪೂರ್ವಾನುಮತಿ ಅಥವಾ ಸಹಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಆದರೆ, ರಮ್ಯಾ ಎಸ್. ಅವರ ವರ್ಗಾವಣೆ ವೇಳೆ ಆಯೋಗದಿಂದ ಇಂತಹ ಯಾವುದೇ ಸಹಮತಿ ಪಡೆದಿರಲಿಲ್ಲ. ಈ ನಿಯಮ ಉಲ್ಲಂಘನೆಯ ಹಿನ್ನೆಲೆಯಲ್ಲಿ ಎಚ್ಚೆತ್ತ ಸರ್ಕಾರ, ತಕ್ಷಣವೇ ತನ್ನ ಆದೇಶಕ್ಕೆ ತಾತ್ಕಾಲಿಕ ತಡೆ ನೀಡಿತ್ತು. ಆದರೆ ಇದೀಗ ಎಸ್ ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯು ಮುಗಿದಿರುವ ಹಿನ್ನೆಲೆಯಲ್ಲಿ ಹೊಸದಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಂತೇಶ್ ಅವರು ಆದೇಶಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now