Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಬಿಹಾರದ ಅಶೋಕಧಾಮ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, ಹಲವರಿಗೆ ಗಾಯ

---Advertisement---

ಲಖಿಸರಾಯ್: ಬಿಹಾರದ ಲಖಿಸರಾಯ್ ಜಿಲ್ಲೆಯ ಅಶೋಕಧಾಮ ದೇವಸ್ಥಾನದಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದ ಕಾಲ್ತುಳಿತದಂತಹ ದುರ್ಘಟನೆಯಲ್ಲಿ ಕನಿಷ್ಠ 7 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಬಿಹಾರ ಪೊಲೀಸರು ನೀಡಿದ ಮಾಹಿತಿಯನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಸೋಮವಾರದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಭಕ್ತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿತ್ತು. ಲಖಿಸರಾಯ್ ಜಿಲ್ಲಾಧಿಕಾರಿ ಶೈಲೇಂದ್ರ ಕುಮಾರ್ ಅವರ ಪ್ರಕಾರ, ಬೆಳಗ್ಗೆ ಸುಮಾರು 6.30ರಿಂದ 6.45ರ ವೇಳೆಗೆ ಎರಡು ರೈಲುಗಳು ಆಗಮಿಸಿದ್ದರಿಂದ ದೇವಸ್ಥಾನದತ್ತ ತೆರಳುತ್ತಿದ್ದ ಭಕ್ತರ ಸಂಖ್ಯೆ ಏಕಾಏಕಿ ಹೆಚ್ಚಾಯಿತು.

ಭಾರೀ ಜನಸಂದಣಿಯ ಒತ್ತಡದಿಂದ ದೇವಸ್ಥಾನದ ಒಂದು ಭಾಗದಲ್ಲಿದ್ದ ಬ್ಯಾರಿಕೇಡ್ ಮುರಿದು ಬಿದ್ದಿದ್ದು, ಬಳಿಕ ಜನರು ಒಬ್ಬರ ಮೇಲೊಬ್ಬರು ಬಿದ್ದ ಪರಿಣಾಮ ಗೊಂದಲ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಗಾಯಗೊಂಡವರನ್ನು ಆಸ್ಪತ್ರೆಗೆ ಕರೆದೊಯ್ಯುವ ವ್ಯವಸ್ಥೆ ಮಾಡಿದ್ದಾರೆ.

ಘಟನೆಯ ನಿಖರ ಕಾರಣ ಹಾಗೂ ಮೃತಪಟ್ಟವರು ಮತ್ತು ಗಾಯಗೊಂಡವರ ಸಂಪೂರ್ಣ ವಿವರಗಳ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಗಾಯಾಳುಗಳ ಸ್ಥಿತಿಗತಿಗಳ ಬಗ್ಗೆಯೂ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Join WhatsApp

Join Now

Join Telegram

Join Now