Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ

---Advertisement---

ಬೆಂಗಳೂರು.ಜುಲೈ.19: ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಚೆನ್ನಮ್ಮನವರು ಜುಲೈ 18ರಂದು ನಿಧನರಾದರು. ಹಿರಿಯ ಜೀವದ ಅಗಲಿಕೆಗೆ ತೀವ್ರ ಸಂತಾಪ ಸೂಚಿಸಿರುವ ರಾಜ್ಯ ಸರ್ಕಾರ, ಮೃತರ ಗೌರವಾರ್ಥವಾಗಿ ಪೂರ್ಣ ಪ್ರಮಾಣದ ಸರ್ಕಾರಿ ಸನ್ಮಾನಗಳೊಂದಿಗೆ ಅಂತಿಮ ಸಂಸ್ಕಾರ ಜರುಗಿಸಲು ತೀರ್ಮಾನಿಸಿದೆ.

ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿದ್ದು, ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಇಡೀ ಸಚಿವ ಸಂಪುಟ ಕಂಬನಿ ಮಿಡಿದಿದೆ.

Join WhatsApp

Join Now

Join Telegram

Join Now