ಸುದ್ದಿಒನ್, ಬೆಂಗಳೂರು.ಜುಲೈ: ಸಿಎಂ ಡಿ.ಕೆ ಶಿವಕುಮಾರ್ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದ್ದು, ನಾಳೆಯೇ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಪದಗ್ರಹಣಕ್ಕೆ ಅಗತ್ಯವಿರುವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಿಎಂ ಕಚೇರಿಯಿಂದ ಲೋಕಭವನಕ್ಕೆ ಮುನ್ಸೂಚನೆ ತಲುಪಿದ್ದು, ಮಧ್ಯಾಹ್ನ 2:00 ರಿಂದ 2:20ರ ಶುಭ ಮುಹೂರ್ತದಲ್ಲಿ ಸಮಾರಂಭ ನಡೆಯುವ ಸಾಧ್ಯತೆ ದಟ್ಟವಾಗಿದೆ.
ಸಚಿವ ಸಂಪುಟದಲ್ಲಿ ಜಾತಿ ಮತ್ತು ಪ್ರದೇಶವಾರು ಸಮತೋಲನ ಕಾಯ್ದುಕೊಳ್ಳಲು ಹೈಕಮಾಂಡ್ ಹಗ್ಗಜಗ್ಗಾಟ ನಡೆಸಿದ್ದು, ಮುಸ್ಲಿಂ ಸಮುದಾಯದಿಂದ ರಿಜ್ವಾನ್ ಅರ್ಷದ್, ಜಮೀರ್ ಅಹಮದ್, ತನ್ವೀರ್ ಸೇಠ್, ಸಲೀಂ ಅಹಮದ್ ಹಾಗೂ ಕನಿಜ್ ಫಾತಿಮಾ ಹೆಸರುಗಳು ಕೇಳಿಬರುತ್ತಿವೆ. ಲಿಂಗಾಯತ ಕೋಟಾದಲ್ಲಿ ಲಕ್ಷ್ಮಣ ಸವದಿ, ಅಶೋಕ ಪಟ್ಟಣ, ವಿಜಯಾನಂದ ಕಾಶಪ್ಪನವರ, ಬಸವರಾಜ ರಾಯರೆಡ್ಡಿ ಸೇರಿದಂತೆ ಪ್ರಮುಖರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಅತ್ತ ಒಕ್ಕಲಿಗ ಕೋಟಾದಲ್ಲಿಯೂ ಮೂರು ಸ್ಥಾನಗಳಿಗೆ ಕಸರತ್ತು ನಡೆದಿದ್ದು, ಶರತ್ ಬಚ್ಚೇಗೌಡ, ಚೆಲುವರಾಯಸ್ವಾಮಿ, ಪ್ರಿಯಾಕೃಷ್ಣ ಹಾಗೂ ಕೆ.ಎಂ. ಶಿವಲಿಂಗೇಗೌಡ ಅಂತಿಮ ಹಂತದ ರೇಸ್ನಲ್ಲಿದ್ದಾರೆ.
ಪರಿಶಿಷ್ಟ ಪಂಗಡ ಕೋಟದಲ್ಲಿ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ ರಘುಮೂರ್ತಿ, ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಹೊಸದುರ್ಗ ಶಾಸಕ ಗೋವಿಂದಪ್ಪ, ಸಂತೋಷ್ ಲಾಡ್, ಅಜಯ್ ಸಿಂಗ್, ಶ್ರೀನಿವಾಸ್ ಮಾನೆ ಮತ್ತು ಮಂಕಾಳು ವೈದ್ಯ ಸ್ಪರ್ಧೆಯಲ್ಲಿದ್ದರೆ, ಮಹಿಳಾ ಪ್ರಾತಿನಿಧ್ಯದಡಿ ಲಕ್ಷ್ಮಿ ಹೆಬ್ಬಾಳ್ಕರ್, ನಯನ ಮೋಟಮ್ಮ, ಆರತಿ ಕೃಷ್ಣ ಹಾಗೂ ಉಮಾಶ್ರೀ ಪೈಕಿ ಇಬ್ಬರಿಗೆ ಸಚಿವ ಸ್ಥಾನದ ಭಾಗ್ಯ ಸಿಗುವ ಸಾಧ್ಯತೆಯಿದೆ. ಇನ್ನೊಂದೆಡೆ, ವಿಧಾನಸಭಾ ಸಭಾಪತಿ ಹುದ್ದೆಗೆ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್ ಹಾಗೂ ಎಚ್.ಕೆ. ಪಾಟೀಲ್ ಹೆಸರುಗಳು ಕೇಳಿಬರುತ್ತಿದ್ದು, ಅಂತಿಮವಾಗಿ ಯಾರಿಗೆ ಯಾವ ಹೊಣೆಗಾರಿಕೆ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








