Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ತೀರ್ಥಹಳ್ಳಿಯಲ್ಲಿ ಭೀಕರ ಗುಡ್ಡ ಕುಸಿತ: ಒಂದೇ ಕುಟುಂಬದ ಮೂವರ ದಾರುಣ ಸಾವು!

---Advertisement---

ಶಿವಮೊಗ್ಗ.ಆಗಸ್ಟ್.2: ಮಲೆನಾಡು ಭಾಗದಲ್ಲಿ ಆರ್ಭಟಿಸುತ್ತಿರುವ ಜಡಿಮಳೆಗೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಹಠಾತ್ ಗುಡ್ಡ ಕುಸಿದು ಬಿದ್ದಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ತಡರಾತ್ರಿ ಸಂಭವಿಸಿದೆ.

ತೀರ್ಥಹಳ್ಳಿಯ ಇಂದಿರಾ ನಗರದಲ್ಲಿ ಮಧ್ಯರಾತ್ರಿ ಸುಮಾರು 2.30ರ ವೇಳೆಗೆ ಈ ದುರಂತ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಸಿದ ಗುಡ್ಡದ ಮಣ್ಣು ಪಕ್ಕದಲ್ಲಿದ್ದ ತಾತ್ಕಾಲಿಕ ಶೆಡ್ ಮೇಲೆಯೇ ಬಿದ್ದಿದೆ. ಪರಿಣಾಮ, ಶೆಡ್‌ನಲ್ಲಿ ಗಾಢ ನಿದ್ರೆಯಲ್ಲಿದ್ದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಮೂಲದ ಮಲ್ಲಿಕಾರ್ಜುನ (35), ಅವರ ಪತ್ನಿ ನಾಗವೇಣಿ (28) ಹಾಗೂ ಕೇವಲ 3 ವರ್ಷದ ಪುಟಾಣಿ ಸಂತೋಷ್ ಮಣ್ಣಿನ ಅಡಿಯಲ್ಲಿ ಸಿಲುಕಿ ಕೊನೆಯುಸಿರೆಳೆದಿದ್ದಾರೆ.

ಇದೇ ವೇಳೆ, ಪಕ್ಕದ ಶೆಡ್‌ನಲ್ಲಿದ್ದ ಇತರ ಕೆಲವರಿಗೂ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ, ಸ್ಥಳೀಯ ರಕ್ಷಣಾ ಕಾರ್ಯಕರ್ತರ ನೆರವಿನೊಂದಿಗೆ ಭರದಿಂದ ಕಾರ್ಯಾಚರಣೆ ನಡೆಸಿ ಮಣ್ಣಿನಡಿಯಲ್ಲಿ ಹೂತುಹೋಗಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ.

Join WhatsApp

Join Now

Join Telegram

Join Now