Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ರೂ ಮುಗಿಯದ ಹೋರಾಟ: ‘CJP’ ಅಧ್ಯಕ್ಷ ಅಭೀಜಿತ್ ದೀಪ್ಕೆ ಹೊಸ ಡಿಮ್ಯಾಂಡ್!

---Advertisement---

ದೆಹಲಿ.ಜುಲೈ.25 : “ಯಾರೂ ಭಯಪಡುವ ಅಗತ್ಯವಿಲ್ಲ. ಇದು ಪ್ರಜಾಪ್ರಭುತ್ವ. ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ನಿಜ, ಆದರೆ ನಮ್ಮ ಹೋರಾಟ ಇಲ್ಲಿಗೇ ಮುಗಿಯುವುದಿಲ್ಲ. ನಮ್ಮ ಉಳಿದ ಎರಡು ಪ್ರಮುಖ ಬೇಡಿಕೆಗಳನ್ನು ಈಡೇರಿಸುವವರೆಗೂ ನಾವು ಇಲ್ಲಿಂದ ಕದಲುವುದಿಲ್ಲ” ಎಂದು ಕಾಕ್ರೋಚ್ ಜನತಾ ಪಾರ್ಟಿಯ ಸಂಸ್ಥಾಪಕ ಅಧ್ಯಕ್ಷ ಅಭೀಜಿತ್ ದೀಪ್ಕೆ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಮುಂದಿನ ಪಟ್ಟುಗಳನ್ನು ಸ್ಪಷ್ಟಪಡಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತು, ಕಾಕ್ರೋಚ್ ಜನತಾ ಪಕ್ಷದ ಸ್ಥಾಪಕ ಅಧ್ಯಕ್ಷ ಅಭಿಜೀತ್ ದೀಪ್ಕೆ, “ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ನೀವು ಭಯಪಡದಿದ್ದರೆ, ನೀವು ಈ ಸರ್ಕಾರಕ್ಕೆ ತಲೆಬಾಗದಿದ್ದರೆ, ನಾವು ಯಾರ ರಾಜೀನಾಮೆಯನ್ನು ಬೇಕಾದರೂ ತೆಗೆದುಕೊಳ್ಳಬಹುದು ಎಂಬುದಕ್ಕೆ ಈ ರಾಜೀನಾಮೆ ಪುರಾವೆಯಾಗಿದೆ” ಎಂದು ಹೇಳಿದ್ದಾರೆ.

 

ಅಭೀಜಿತ್ ದೀಪ್ಕೆ ಅವರ ಮುಖ್ಯ ಬೇಡಿಕೆಗಳು:

ಆತ್ಮಹತ್ಯೆಗೆ ಶರಣಾದ ಮಕ್ಕಳ ಪ್ರತಿಯೊಂದು ಕುಟುಂಬಕ್ಕೂ ಸರ್ಕಾರ ತಕ್ಷಣವೇ ತಲಾ ಒಂದು ಕೋಟಿ ರೂಪಾಯಿ ಪರಿಹಾರ ಧನ ಬಿಡುಗಡೆ ಮಾಡಬೇಕು.

ಕಳೆದ 20 ರಂದು ಅಮಾಯಕರ ಮೇಲೆ ದೌರ್ಜನ್ಯ ಎಸಗಿದ ಗೂಂಡಾ ವರ್ತನೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣವೇ ಶಿಸ್ತುಕ್ರಮ ಜರುಗಿಸಬೇಕು.

“ಕಾಕ್ರೋಚ್ಗಳ ತಂಟೆಗೆ ಬಂದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂಬುದನ್ನು ನೆನಪಿಡಿ” ಎಂದು ಸವಾಲು ಎಸೆದಿರುವ ದೀಪ್ಕೆ, ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Join WhatsApp

Join Now

Join Telegram

Join Now