Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರು ದುರ್ಮರಣ

---Advertisement---

ಮಂಡ್ಯ.ಸೆಪ್ಟೆಂಬರ್: ಹಾಲಿನ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದಲ್ಲಿನಡೆದಿದೆ.

ಹಬ್ಬದ ಸಂಭ್ರಮ ಮುಗಿಸಿ ರಾಜಧಾನಿ ಬೆಂಗಳೂರಿಗೆ ವಾಪಸಾಗುತ್ತಿದ್ದ ಕುಟುಂಬವು ದುರಂತ ಅಂತ್ಯ ಕಂಡಿದೆ. ಬೆಂಗಳೂರು ಮೂಲದ ಮುತ್ತುರಾಜ್ (35), ಅವರ ಪತ್ನಿ ಕಾವ್ಯ (30) ಹಾಗೂ ಎಂಟು ವರ್ಷದ ಪುತ್ರಿ ಕೀರ್ತನಾ ಮೃತಪಟ್ಟ ದುರ್ದೈವಿಗಳು. ಅಪಘಾತದಲ್ಲಿ ದಂಪತಿಯ ಮತ್ತೊಂದು ಮಗುವಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾದ ಆ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಕೊಪ್ಪ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

Join WhatsApp

Join Now

Join Telegram

Join Now