Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಯೋಗೇಶ್ ಗೌಡ ಕೊಲೆ ಕೇಸ್; ಹೈಕೋರ್ಟ್ ನಿಂದ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜಾಮೀನು!

---Advertisement---

ಬೆಂಗಳೂರು.ಜುಲೈ.31: ಧಾರವಾಡದ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿರುವ ಉನ್ನತ ನ್ಯಾಯಾಲಯ, ಅವರಿಗೆ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಅಷ್ಟೇ ಅಲ್ಲದೆ, ವಿನಯ್ ಕುಲಕರ್ಣಿ ಅವರನ್ನು ದೋಷಿ ಎಂದು ಘೋಷಿಸಿದ್ದ ತೀರ್ಪಿನ ಜಾರಿಗೆ ಮಧ್ಯಂತರ ತಡೆಯಾಜ್ಞೆ ನೀಡುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ನ್ಯಾಯಾಲಯವು ವಿಧಿಸಿರುವ ಷರತ್ತುಗಳ ಪ್ರಕಾರ, ವಿನಯ್ ಕುಲಕರ್ಣಿ ಅವರು 5 ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಒಬ್ಬರ ಶ್ಯೂರಿಟಿ ನೀಡಬೇಕಾಗಿದೆ. ಈ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಅವರಿಗೆ ಜಾಮೀನಿನ ಸೌಲಭ್ಯ ಅಧಿಕೃತವಾಗಿ ಸಿಗಲಿದೆ. ವಿಶೇಷ ನ್ಯಾಯಾಲಯದ ತೀರ್ಪಿನಿಂದ ಕಂಗಾಲಾಗಿದ್ದ ಮಾಜಿ ಸಚಿವರಿಗೆ ಹೈಕೋರ್ಟ್ನ ಈ ನಿರ್ಧಾರ ದೊಡ್ಡ ಆಶ್ವಾಸನೆ ತಂದಿಟ್ಟಿದೆ.

Join WhatsApp

Join Now

Join Telegram

Join Now