Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING : ಚಿತ್ರದುರ್ಗದ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ `ಕುಶಾಲ್ ಚೌಕ್ಸೆ’ ನೇಮಕ

---Advertisement---

ಸುದ್ದಿಒನ್,  ಬೆಂಗಳೂರು, ಸೆಪ್ಟೆಂಬರ್. 23 : ರಾಜ್ಯ ಸರ್ಕಾರವು ಚಿತ್ರದುರ್ಗಕ್ಕೆ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕುಶಾಲ್ ಚೌಕ್ಸೆ ನೇಮಕ ಮಾಡಿ ಆದೇಶ ಹೊರಡಿಸಿದೆ.

ರಾಜ್ಯ ಸರ್ಕಾರವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಮಹತ್ವದ ಆದೇಶ ಹೊರಡಿಸಿದೆ. ಪ್ರಸ್ತುತ ಬೆಂಗಳೂರಿನ ಆಡಳಿತ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿ (ಡಿಸಿಪಿ) ಸೇವೆ ಸಲ್ಲಿಸುತ್ತಿದ್ದ 2018ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಕುಶಾಲ್ ಚೌಕ್ಸೆ ಅವರನ್ನು ಚಿತ್ರದುರ್ಗ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್ಪಿ) ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ.

ಚಿತ್ರದುರ್ಗದ ಎಸ್ಪಿಯಾಗಿದ್ದ ರಂಜಿತ್ ಕುಮಾರ್ ಬಂಡಾರು ಅವರ ಸ್ಥಾನಕ್ಕೆ ಕುಶಾಲ್ ಚೌಕ್ಸೆ ಅವರನ್ನು ನಿಯೋಜಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ.ಎಸ್. ಅವರು ರಾಜ್ಯಪಾಲರ ಆದೇಶದ ಮೇರೆಗೆ ಈ ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now