in

ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಚುನಾವಣೆಯಲ್ಲಿ ಅಧಿಕಾರಕ್ಕೆ ತನ್ನಿ : ನಟ್ಟ ಡಿಸೋಜ

suddione whatsapp group join

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಏ.27) : ನವಲತ್ತು ಪರ್ಸೆಂಟ್ ಕಮಿಷನ್ ಸರ್ಕಾರವನ್ನು ರಾಜ್ಯದಿಂದ ಕಿತ್ತೊಗೆದು ಬಡವರಿಗೆ ಭಾಗ್ಯಗಳನ್ನು ನೀಡಿರುವ ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವಂತೆ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನಟ್ಟ ಡಿಸೋಜ ಮನವಿ ಮಾಡಿದರು.

ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎ.ಐ.ಸಿ.ಸಿ. ಸೂಚನೆಯಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಮಹಿಳೆಯರ ಸಮಸ್ಯೆ ಕುಂದುಕೊರತೆಗಳನ್ನು ಆಲಿಸುತ್ತಿದ್ದೇನೆ. ಕೇಂದ್ರ ಮತ್ತು ರಾಜ್ಯದಲ್ಲಿ ಕೋಮುವಾದಿ ಬಿಜೆಪಿ. ಅಧಿಕಾರಕ್ಕೆ ಬಂದಾಗಿನಿಂದಲೂ ಮಹಿಳೆಯರು ದುಃಖಿಗಳಾಗಿದ್ದಾರೆ. ಅಡುಗೆ ಅನಿಲ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜೊತೆ ಜಿ.ಎಸ್.ಟಿ. ಬರೆ ಬೇರೆ. ಬಡವರು ತತ್ತರಿಸಿದ್ದಾರೆ.

ಭ್ರಷ್ಠಾಚಾರದಲ್ಲಿ ಮುಳುಗಿರುವ ಬಿಜೆಪಿ.ಗೆ ದೇಶದ ಜನರ ಹಿತ ಬೇಕಿಲ್ಲ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಆರಕ್ಕೆ ಆರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಬೇಕು. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಗೃಹಜ್ಯೋತಿ ಯೋಜನೆಯಡಿ ಇನ್ನೂರು ಯೂನಿಟ್ ಉಚಿತ ಕರೆಂಟ್, ಬೆಲೆ ಏರಿಕೆಗಾಗಿ ಪ್ರತಿ ಮನೆಯ ಒಡತಿಗೆ ಪ್ರತಿ ತಿಂಗಳು ಎರಡು ಸಾವಿರ ರೂ.ಗಳನ್ನು ಉಚಿತವಾಗಿ ನೀಡಲಾಗುವುದು. ಬಿ.ಪಿ.ಎಲ್.ಕುಟುಂಬಕ್ಕೆ ತಿಂಗಳಿಗೆ ಹತ್ತು ಕೆ.ಜಿ. ಅಕ್ಕಿ, ಪದವೀಧರ ನಿರುದ್ಯೋಗಿಗಳಿಗೆ ಮಾಸಿಕ ಮೂರು ಸಾವಿರ ರೂ. ಡಿಪ್ಲಮೋ ಪಡೆದವರಿಗೆ ತಿಂಗಳಿಗೆ ಒಂದುವರೆ ಸಾವಿರ ರೂ.ಗಳನ್ನು ನೀಡಲಾಗುವುದು. ಕಾಂಗ್ರೆಸ್‍ನಿಂದ ಮಾತ್ರ ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯ ಎಂದು ಹೇಳಿದರು.

ದೇಶ ನಡೆಸುವ ಶಕ್ತಿ ಬಿಜೆಪಿ.ಗಿಲ್ಲ. ರಾಜ್ಯದ ಜನ ಬೇಸತ್ತು ಬದಲಾವಣೆ ಬಯಸುತ್ತಿದ್ದಾರೆ. ರಾಜಸ್ಥಾನದಲ್ಲಿ ನಮ್ಮ ಸರ್ಕಾರ ಮಹಿಳೆಯರಿಗೆ ಅನೇಕ ಕೊಡುಗೆಗಳನ್ನು ನೀಡಿದೆ. ಅದೇ ರೀತಿ ರಾಜ್ಯದಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ ಎಂದರು.

ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ್‍ನಾಥ್ ಮಾತನಾಡಿ ಡಿಸೋಜರವರು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರ ಪಾತ್ರ ತುಂಬಾ ಮುಖ್ಯ. ಮನೆ ಮನೆಗೆ ಹೋಗಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನೀಡಿದ ಜನಪರ ಯೋಜನೆಗಳನ್ನು ಜನತೆಗೆ ತಿಳಿಸಿ ವಾರ್ಡ್ ಮತ್ತು ಬೂತ್‍ಗಳಲ್ಲಿ ಮತಗಳನ್ನು ಗಟ್ಟಿಗೊಳಿಸಿಕೊಳ್ಳಬೇಕು. ರಾಜ್ಯದ ರಾಜಕೀಯ ದಿಕ್ಕನ್ನು ಬದಲಿಸುವ ಶಕ್ತಿ ಮಹಿಳೆಯರಿಗಿದೆ ಎಂದು ಹೇಳಿದರು.
ಬಿಜೆಪಿ. ಸರ್ಕಾರ ಬೆಲೆ ಏರಿಸಿದಾಗಲೆಲ್ಲಾ ಮಹಿಳಾ ಕಾಂಗ್ರೆಸ್‍ನಿಂದ ಹೋರಾಟ ನಡೆಸಿದ್ದೇವೆ. ನಲವತ್ತು ಪರ್ಸೆಂಟ್ ಕಮೀಷನ್ ಸರ್ಕಾರವನ್ನು ಈ ಚುನಾವಣೆಯಲ್ಲಿ ಸೋಲಿಸಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ವಿನಂತಿಸಿದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ನಂದಿನಿಗೌಡ, ಜಿಲ್ಲಾ ಚುನಾವಣಾ ಉಸ್ತುವಾರಿ ಚಂದ್ರಕಲ, ಡಾ.ಸೀಮ, ಕೆ.ಪಿ.ಸಿ.ಸಿ. ಮಹಿಳಾ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮೋಕ್ಷರುದ್ರಸ್ವಾಮಿ, ಮುನಿರಾ ಎ.ಮಕಾಂದಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಆರತಿ ಮಹಡಿ ಶಿವಮೂರ್ತಿ, ಮೆಹಬೂಬ್ ಖಾತೂನ್  ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಮೋದಿ ಮಾತುಕತೆ : ಚುನಾವಣೆಯ ಮುನ್ನ ಶಕ್ತಿ ತುಂಬಿದ ಪ್ರಧಾನಿ

ನಾಳೆ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ..!