ಬೆಂಗಳೂರು: ಜೆಡಿಎಸ್ ನಲ್ಲಿ ಪ್ರಜ್ವಲ್ ಹಾಗೂ ನಿಖಿಲ್ ಕುಮಾರ್ ಸ್ವಾಮಿ ನಡುವೆ ಎಲ್ಲವೂ ಸರಿಯಿಲ್ಲ ಎಂಬ ಮಾತು ಆಗಾಗ ಕೇಳಿ ಬರ್ತಾ ಇತ್ತು. ಆದ್ರೆ ಎಲ್ಲವೂ ಸರಿಯಿದೆ ಅನ್ನೋದನ್ನ ಈ ಸಹೋದರರು ಆಗಾಗ ಪ್ರೂವ್ ಮಾಡ್ತಾನೆ ಇರ್ತಾರೆ. ಇದೀಗ ಒಂದೇ ವೇದಿಕೆಯಲ್ಲಿ ನೆರೆದಿದ್ದು, ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.
ಬಿಡದಿ ತೋಟದ ಮನೆಯಲ್ಲಿ ನಾಲ್ಕು ದಿನಗಳಿಂದ ಜೆಡಿಎಸ್ ಜನತಾ ಪರ್ವ ಕಾರ್ಯಕ್ರಮ ನಡೆಯುತ್ತಿದೆ. ಆ ಕಾರ್ಯಕ್ರಮದಲ್ಲಿ ಇಂದು ನಿಖಿಲ್ ಹಾಗೂ ಪ್ರಜ್ವಲ್ ಇಬ್ಬರು ಭಾಗಿಯಾಗಿದ್ದಾರೆ. ಈ ಯುವ ನಾಯಕರನ್ನ ನೋಡಿ ಯುವ ತಂಡ ಕೇಕೆ ಹಾಕಿ, ಶಿಳ್ಳೆ ಹೊಡೆದು, ಚಪ್ಪಾಳೆ ತಟ್ಟಿದೆ.
ಕುಟುಂಬದಲ್ಲಿಯೂ ನಾವು ಒಂದೇ. ಪಕ್ಷದಲ್ಲಿ ಕೂಡ ಒಂದೇ. ನಮ್ಮನ್ನು ಬೇರೆ ಮಾಡಲು ಯಾರಿಗೂ ಸಾಧ್ಯವಿಲ್ಲ ಎಂದು ಘೋಷಿಸಿದ್ದಾರೆ. ಮಾತನಾಡಿದ ಪ್ರಜ್ವಲ್ ರೇವಣ್ಣ, ಅಣ್ಣ-ತಮ್ಮಂದಿರಾಗಿ ನಾವು ಯಾವತ್ತಿಗೂ ಒಂದೇ. ರಾಜ್ಯದಲ್ಲಿ ಪಕ್ಷ ಕಟ್ಟಲು ನಾವಿಬ್ಬರು ಒಂದಾಗಿ ಇದ್ದೇವೆ. ಕುಮಾರಣ್ಣ ಅವರನ್ನು ಮತ್ತೆ ಸಿಎಂ ಮಾಡಲು ನಾವು ಇಬ್ಬರು ಯಾವಾಗಲೂ ಒಂದಾಗಿ ಇರ್ತೀವಿ ಎಂದಿದ್ದಾರೆ.