Connect with us

Hi, what are you looking for?

ಪ್ರಮುಖ ಸುದ್ದಿ

ಮುಖ್ಯಮಂತ್ರಿ ಬದಲಾದರೆ ಯಡಿಯೂರಪ್ಪನವರಿಗೇನು ನಷ್ಟವಿಲ್ಲ, ಆದರೆ ಪಕ್ಷಕ್ಕೆ ದೊಡ್ಡ ನಷ್ಟ ಖಚಿತ : ಡಾ. ಶಿವಮೂರ್ತಿ ಮುರುಘಾ ಶರಣರು

ಸುದ್ದಿಒನ್ ನ್ಯೂಸ್ | ಚಿತ್ರದುರ್ಗ,(ಜು. 20) : ರಾಜ್ಯದ ಮುಖ್ಯಮಂತ್ರಿಗಳು ಬದಲಾದರೆ ಯಡಿಯೂರಪ್ಪನವರಿಗೇನು ನಷ್ಟ ಇಲ್ಲ. ಆದರೆ ಪಕ್ಷಕ್ಕೆ ದೊಡ್ಡ ನಷ್ಟ ಉಂಟಾಗಬಹುದು. ಇದ್ದಕ್ಕಿದ್ದಂತೆ ಒಬ್ಬ ನಾಯಕ ಹುಟ್ಟುವುದಿಲ್ಲ. ಅದು ನಿಧಾನವಾಗಿ ಬರುವ ಪ್ರಕ್ರಿಯೆ. ಆದರೆ ಯಡಿಯೂರಪ್ಪನವರನ್ನು ಮಧ್ಯದಲ್ಲಿ ಬದಲಾಯಿಸಿದರೆ ತೊಂದರೆಯಾಗುವುದು ಖಚಿತ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟರು.

ಚಿತ್ರದುರ್ಗ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶ್ರೀಗಳು ಮಾತನಾಡಿದರು. ಅವರು ವಯಸ್ಸನ್ನು ಮೀರಿ ಯುವಕರಂತೆ ಕೆಲಸ ಮಾಡುತ್ತಿದ್ದಾರೆ. ಅವರ ಕಾರ್ಯವೈಖರಿ ಅದ್ಭುತವಾದದ್ದು. ಅವರ ರಾಜಕೀಯ ಅನುಭವ ಅಮೋಘವಾದುದು. ಪಕ್ಷದೊಳಗೆ ತೊಂದರೆಯಾಗಬಾರದು. ಅವರು ಶಕ್ತಿ ತೋರಿಸಬಲ್ಲರು. ಅಂತಹ ಮುತ್ಸದ್ಧಿ. ಅವರೊಬ್ಬ ಮಾಸ್ ಲೀಡರ್. ಎಲ್ಲ ಧರ್ಮ ಸಮುದಾಯದವರನ್ನು ಪ್ರೀತಿಯಿಂದ ನೋಡಿದ್ದಾರೆ. ಅದಕ್ಕೆ ಪತ್ರಿಕಾಗೋಷ್ಠಿಯಲ್ಲಿರುವ ಸ್ವಾಮೀಜಿಗಳೇ ಸಾಕ್ಷಿ.

ಯಾವುದೇ ಸಂದರ್ಭದಲ್ಲಿ ಅವರ ಗೌರವ ಘನತೆಗೆ ಧಕ್ಕೆ ಬರುವಂತೆ ಮಾಡಬಾರದು. ನಿರಾತಂಕ ವಾತಾವರಣ ಸೃಷ್ಟಿಸಬೇಕು. ಅವರನ್ನು ಮುಖ್ಯಮಂತ್ರಿಗಳಾಗಿ ಮುಂದುವರೆಸಬೇಕು. ಇದು ಎಲ್ಲ ಪಕ್ಷದವರು ಸಹ ಅವರನ್ನು ಮುಂದುವರೆಸಬೇಕೆಂದು ಹೇಳಿದ್ದಾರೆ.
ಆದರೆ ರಾಜ್ಯ ರಾಜಕಾರಣದಲ್ಲಿ ಒಂದಷ್ಟು ವ್ಯತ್ಯಾಸಗಳು ಏರಿಳಿತಗಳು ಆಗುತ್ತಿವೆ. ಅದು ಎಲ್ಲರಲ್ಲೂ ಗಾಬರಿ ಮತ್ತು ಆತಂಕ ಸೃಷ್ಟಿಸಿದೆ.

ನಿರಾತಂಕ, ಆತಂಕರಹಿತವಾದ ಆಡಳಿತ ನೀಡಬೇಕಾಗುತ್ತದೆ. ಆಂತರಿಕ ಬೇಗುದಿ ಇರಬಾರದು. ಒಂದು ಹಂತದಲ್ಲಿ ಆಂತರಿಕ ಕಚ್ಚಾಟ ಇರಬಾರದು. ಯಡಿಯೂರಪ್ಪ ನಾಡು ಕಂಡ ಶ್ರೇಷ್ಠ ರಾಜಕೀಯ ಮುತ್ಸದ್ಧಿಯಾಗಿದ್ದಾರೆ. ಏಕವ್ಯಕ್ತಿ ಹೋರಾಟ ಆರಂಭಿಸಿ ಸರ್ಕಾರ ರಚಿಸುವಷ್ಟರ ಮಟ್ಟಿಗೆ ಶಕ್ತಿಯನ್ನು ಪಡೆದುಕೊಂಡಿದ್ದಾರೆ. 4 ಬಾರಿ ಮುಖ್ಯಮಂತ್ರಿಯಾಗಿ ಕೊರೋನಾ ಸಂದರ್ಭದಲ್ಲಿ ಗಂಭೀರ ಪರಿಸ್ಥಿತಿಯನ್ನು ಚಾಕಚಕ್ಯತೆಯಿಂದ, ವ್ಯತ್ಯಾಸ ಬರದಂತೆ ಮಾನವೀಯತೆಯಿಂದ ಅದನ್ನು ನಿಭಾಯಿಸಿದ್ದಾರೆ. ಕೇಂದ್ರಸರ್ಕಾರವು ಸಹ ಮುಖ್ಯಮಂತ್ರಿಗಳ ಕಾರ್ಯವೈಖರಿಯನ್ನು ಶ್ಲಾಘಿಸಿದೆ.

ಎಲ್ಲಿಯೂ ವಿಚಲಿತರಾಗದೆ ಮುಂಜಾಗ್ರತೆ ವಹಿಸಿ ಕೊರೋನಾವನ್ನು ನಿಯಂತ್ರಿಸಿದ್ದಾರೆ. ಈ ಸಂದರ್ಭದಲ್ಲಿ ನಾಯಕತ್ವದ ಬದಲಾವಣೆ ವಿಚಾರವು ರಾಜ್ಯದ ಜನರಲ್ಲಿ ಆತಂಕ ಸೃಷ್ಟಿಸಿದೆ. ಮುಖ್ಯಮಂತ್ರಿಗಳು ಬದಲಾದರೆ ನಾಡಿನ ಸಮಸ್ತ ಮಠಾಧೀಶರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣ ಎಂದರು.

ಮಾದಾರಚೆನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಶ್ರೀಗಳು ಮಾತನಾಡಿ, ದಕ್ಷಿಣ ಭಾರತದಲ್ಲಿ ಪ್ರಥಮವಾಗಿ ಪಕ್ಷವನ್ನು ಅಧಿಕಾರಕ್ಕೆ ತಂದವರು ಯಡಿಯೂರಪ್ಪನವರು. ಅವರು ಅಧಿಕಾರಕ್ಕೆ ಬಂದ ನಂತರ ಎಲ್ಲ ಶೋಷಿತ ಸಮುದಾಯದ ಮಠಗಳನ್ನು ಮೇಲೆತ್ತಿದರು. ಅಧಿಕಾರ ವಹಿಸಿಕೊಂಡ ನಂತರ ಅವರಿಗೆ ಅನೇಕ ಸಮಸ್ಯೆಗಳು ಸುತ್ತಿಕೊಳ್ಳುತ್ತಿವೆ. ಅತಿವೃಷ್ಟಿ, ಅನಾವೃಷ್ಟಿ, ಕೊರೋನಾ ಎಲ್ಲವೂ ಬಂದರೂ ಅವೆಲ್ಲವನ್ನು ಧೈರ್ಯವಾಗಿ ಎದುರಿಸಿದ್ದಾರೆ. ಈ ಅವಧಿಯನ್ನು ಸಂಪೂರ್ಣವಾಗಿ ಮುಗಿಸಲು ಅವಕಾಶ ಮಾಡಿಕೊಡಬೇಕು. ಅದನ್ನವರು ಯಶಸ್ವಿಯಾಗಿ ಪೂರೈಸುತ್ತಾರೆ. ಪಕ್ಷದ ಆಂತರಿಕ ಬೇಗುದಿ ಹೊರಬರದಂತೆ ನೋಡಿಕೊಳ್ಳಬೇಕು. ಅವರಿಗೆ ಏನಾದರೂ ತೊಂದರೆ ಆದರೆ ಅದು ಪಕ್ಷಕ್ಕೆ ಆಗುವ ತೊಂದರೆಯಾಗಲಿದೆ ಎಂದರು.

ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮಿಗಳು ಮಾತನಾಡಿ, ಎಲ್ಲ ಸಮುದಾಯದವರಿಗೆ ಮಠ ಕಟ್ಟಿಕೊಟ್ಟವರು ಮುರುಘಾ ಶರಣರು. ಆದರೆ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದವರು ಯಡಿಯೂರಪ್ಪನವರು. ಕರ್ನಾಟಕದಲ್ಲಿ ಬಿಜೆಪಿ ಬಂದಿದ್ದರೆ ಅದು ಯಡಿಯೂರಪ್ಪನವರ ಶ್ರಮ. ಈ ಅವಧಿ ಯಡಿಯೂರಪ್ಪನವರ ಶ್ರಮದ ಫಲ. ಎಲ್ಲ ಸಮುದಾಯವನ್ನು ತನ್ನೊಟ್ಟಿಗೆ ಕರೆದುಕೊಂಡು ಹೋಗುತ್ತಿದ್ದಾರೆ. ಮಧ್ಯದಲ್ಲಿ ಅವರ ಗೌರವಕ್ಕೆ ಧಕ್ಕೆ ತರಬಾರದು. ಅವರನ್ನು ಮುಂದುವರಿಸಬೇಕು. ಅವರ ಜೊತೆ ನಾವೆಲ್ಲ ಇರುತ್ತೇವೆ. ಅವರಿಗೆ ನೈತಿಕ ಬೆಂಬಲ ನೀಡುತ್ತೇವೆ ಎಂದು ಹೇಳಿದರು.

ಭೋವಿ ಗುರುಪೀಠದ ಶ್ರೀ ಸಿದ್ಧರಾಮೇಶ್ವರ ಸ್ವಾಮಿಗಳು ಮಾತನಾಡಿ, ಯಡಿಯೂರಪ್ಪನವರು ಬರೀ ಲಿಂಗಾಯತ ಸಮುದಾಯದ ನಾಯಕರಲ್ಲ. ಅವರು ಸರ್ವ ಸಮುದಾಯದ ನಾಯಕರು. ಅವರ ಭರವಸೆಗಳು ಸಂಪೂರ್ಣವಾಗಿ ಈಡೇರಿವೆ. ಪೂರ್ಣ ಪ್ರಮಾಣದ ಸರ್ಕಾರ ಮುಂದುವರೆಯಬೇಕು. ಕಾರಣ ಅವರ ಹಿಂದೆ ಮಠಾಧೀಶರು, ಸಮುದಾಯ, ಜನಬೆಂಬಲ ಇದೆ. ಅವರ ಮೇಲೆ ಎಲ್ಲರ ಆಶೀರ್ವಾದ ಇದೆ. ಹೈಕಮಾಂಡ್ ಕೂಡ ಯೋಚಿಸಿ ನಿರ್ಧರಿಸಬೇಕೆಂದು ಒತ್ತಾಯಿಸಿದರು.

ಇಳಕಲ್‍ನ ಗುರುಮಹಾಂತೇಶ್ವರ ಮಠದ ಶ್ರೀ ಗುರುಮಹಾಂತ ಸ್ವಾಮಿಗಳು ಮಾತನಾಡಿ, ಯಾವುದೇ ಜಾತಿ ಧರ್ಮವನ್ನು ನೋಡದೆ ಎಲ್ಲರನ್ನೂ ಸಮಾನವಾಗಿ ಯಡಿಯೂರಪ್ಪನವರು ಕಂಡಿದ್ದಾರೆ. ಅವರನ್ನು ಅವಧಿಪೂರ್ಣಗೊಳಿಸಲು ಬಿಡಬೇಕೆಂದರು.

ಸುದ್ದಿಗೋಷ್ಠಿಯಲ್ಲಿ ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮಿಗಳು, ಶಿರಸಿ ರುದ್ರದೇವರ ಮಠದ
ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ಸತ್ತಿಮಠದ ಸ್ವಾಮಿಗಳು, ಚಳ್ಳಕೆರೆಯ ಶ್ರೀ ಬಸವಕಿರಣ ಸ್ವಾಮಿಗಳು, ಎಸ್.ಜೆ.ಎಂ. ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ.ಪರಮಶಿವಯ್ಯ ಮೊದಲಾದವರಿದ್ದರು.

2 Comments

2 Comments

Leave a Reply

Your email address will not be published. Required fields are marked *

Latest

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

ಪ್ರಮುಖ ಸುದ್ದಿ

ಬೆಂಗಳೂರು :ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೊನೆ ಕ್ಷಣದಲ್ಲಿ ತನ್ನ ಪಾಳಯದ ಬಸವರಾಜ್ ಬೊಮ್ಮಾಯಿ ಅವರಿಗೆ ಪಟ್ಟ ಕಟ್ಟಿ ಇದೀಗ ರಾಜ್ಯ ಪ್ರವಾಸಕ್ಕೆ ಮುಂದಾಗಿದ್ದಾರೆ ಬಿ.ಎಸ್.ಯಡಿಯೂರಪ್ಪ. ದೆಹಲಿಯಲ್ಲಿ ಸಚಿವ ಸಂಪುಟ ಕಸರತ್ತು...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!