ಚಿತ್ರದುರ್ಗ. ಮಾ.23 : ಬಿಎಸ್‌ಎನ್‌ಎಲ್ ಬಳಕೆದಾರರು ಅತಿ ವೇಗದ 4ಜಿ ನೆಟ್‌ವರ್ಕ್ ಸೇವೆ ಪಡೆಯಲು ತಮ್ಮ ಹಳೆಯ ಸಿಮ್‌ಗಳನ್ನು ಮೇಲ್ದರ್ಜೆಗೆ ಏರಿಸಿಕೊಳ್ಳುವುದು ಕಡ್ಡಾಯವಾಗಿದೆ.
ಆಧಾರ್, ಓಟರ್ ಐಡಿ ಅಥವಾ ಡ್ರೈವಿಂಗ್ ಲೈಸೆನ್ಸ್ ನೊಂದಿಗೆ ಹತ್ತಿರದ ಬಿಎಸ್‌ಎನ್‌ಎಲ್ ಗ್ರಾಹಕರ ಸೇವಾ ಕೇಂದ್ರಗಳಿಗೆ ತೆರಳಿ, ಉಚಿತವಾಗಿ ಹಳೆಯ ಸಿಮ್ ಬದಲು ಹೊಸ 4ಜಿ ಸಿಮ್ ಪಡೆಯಬಹುದಾಗಿದೆ.
ಗ್ರಾಹಕರ ಅನುಕೂಲಕ್ಕಾಗಿ ರಜಾದಿನಗಳಾದ ಮಾರ್ಚ್ 24 ಹಾಗೂ 31ರ ಭಾನುವಾರ, ಮಾರ್ಚ್ 29 ಗುಡ್ ಫ್ರೈಡೇ ದಿನದಂದು ಗ್ರಾಹಕ ಸೇವಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















