ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಏ. 25 : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 50 ವರ್ಷ ರಾಜ್ಯಸುತ್ತಿದ್ದಾರೆ. ರೈತರ ಪರವಾಗಿ ಹೋರಾಡಿ, ದೀನದಲಿತರಿಗೆ ನ್ಯಾಯ ಒದಗಿಸಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ್ದಾರೆ. ಅವರ ಜೀವನ ಮತ್ತು ಸಮಾಜಸೇವೆ ಕುರಿತು ಅಭಿಮಾನೋತ್ಸವ ಆಚರಿಸಲು ತೀರ್ಮಾನಿಸಲಾಗಿದೆ ಈ ಹಿನ್ನಲೆಯಲ್ಲಿ ಚಿತ್ರದುರ್ಗದಲ್ಲಿ ಮೇ. 9 ರಂದು ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನಲೆಯಲ್ಲಿ ಇಂದು ನಗರದ ಹೊರವಲಯದ ಶ್ರೀ ಮಾದರ ಚೆನ್ನಯ್ಯ ಗುರುಪೀಠದ ಪಕ್ಕದಲ್ಲಿರುವ ಮೈದಾನದಲ್ಲಿ ಕಾರ್ಯಕ್ರಮದ ಸ್ಥಳಗಳಲ್ಲಿ ಪೆಂಡಾಲ್. ಸ್ಟೇಜ್ ಮುಂತಾದ ವ್ಯವಸ್ಥೆಗಳನ್ನು ಪ್ರಾರಂಭಿಸಲು ಕಾರ್ಯಕ್ರಮಕ್ಕೆ ಸಂಭ್ರಮಾಚರಣೆಯ ವೇದಿಕೆ ಭೂಮಿಪೂಜೆ ಕಾರ್ಯಕ್ರಮವೂ ಏ. 26ರ ಭಾನುವಾರ ಬೆಳ್ಳಿಗೆ 10 ಗಂಟೆಗೆ ನಡೆಯಲಿದೆ.
ಇಂದು ಸ್ಥಳಕ್ಕೆ ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಭೇಟಿ ನೀಡಿ ಸ್ಥಳವನ್ನು ಪರೀಶೀಲಿಸಿ ಮಾತನಾಡಿದ ಅವರು ಅಭಿಮಾನೋತ್ಸವದ ಹಿಂದಿನ ದಿನ ಅಂದರೆ ಮೇ 8ರಂದು ಸಂಜೆ 6ಗಂಟೆಗೆ ಯಡಿಯೂರಪ್ಪ ಅವರ ಪುರಪ್ರವೇಶ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಈ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನಿರೀಕ್ಷೆ ಇದೆ. ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಲು ತಂಡಗಳನ್ನು ರಚಿಸಲಾಗಿದೆ ನಾಡಿನ ಎಲ್ಲ ಮಠಾಧೀಶರು, ಮಾಜಿ ಮುಖ್ಯಮಂತ್ರಿಗಳು, ಸಚಿವರು ಮತ್ತು ಗಣ್ಯರನ್ನು ಆಹ್ವಾನಿಸಲಾಗುತ್ತಿದೆ. ಯಡಿಯೂರಪ್ಪ ಅವರನ್ನು ಬಲ್ಲ ಸಾಹಿತಿಗಳು, ಒಡನಾಡಿಗಳು, ಕಲಾವಿದರು ಸೇರಿ ಸಮಾಜದ ಎಲ್ಲ ರಂಗದವರು ಭಾಗವಹಿಸುತ್ತಾರೆ ಎಂದು ಹೇಳಿದರು .
ಖನಿಜ ನಿಗಮದ ಮಾಜಿ ಅಧ್ಯಕ್ಷರಾದ ಲಿಂಗಮೂರ್ತಿ ಮಾತನಾಡಿ, ಯಡಿಯೂರಪ್ಪ ಅವರ 50 ವರ್ಷಗಳ ರಾಜಕೀಯ ಪಯಣವನ್ನು ಸಂಭ್ರಮದಿಂದ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ನಾಡಿಗೆ ಯಡಿಯೂರಪ್ಪ ಸಿದ್ಧತೆ ನೀಡಿದ ಕೊಡುಗೆಗೆ ಎಲ್ಲ ವರ್ಗದವರೂ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇದಕ್ಕಾಗಿ ಅರ್ಥಪೂರ್ಣ. ಭವ್ಯ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದ ಅವರು. ರಾಜ್ಯದ ಮೂಲೆಮೂಲೆಗಳಿಂದ ಅಭಿಮಾನಿಗಳು ಲಕ್ಷಾಂತರ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಜನರು ಬರಲಿದ್ದಾರೆ. ಒಂದು ಐತಿಹಾಸಿಕ ಕಾರ್ಯಕ್ರಮ ಇದಾಗಲಿದೆ ಎಂದು ವಿವರಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಮಾತನಾಡಿ, ಭೂಮಿಪೂಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಮಾಜಿ ಸಚಿವ ಬಿ ಶ್ರೀರಾಮುಲು, ಸೇರಿದಂತೆ ಅನೇಕ ಸ್ವಾಮೀಜಿಗಳು, ಶಾಸಕರು, ಸಂಸದರು, ಮಾಜಿ ಮಂತ್ರಿಗಳು,ಮಾಜಿ ಶಾಸಕರು ಹಾಗೂ ಬಿಎಸ್‍ವೈ ಅಭಿಮಾನಿ ಮತ್ತು ಹಿತೈಷಿ ಭಾಗವಹಿಸಲಿದ್ದಾರೆ. ಮೇ 9ರಂದು ಕಾರ್ಯಕ್ರಮದ ಉದ್ಘಾಟನೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನೆರವೇರಿಸಿ ಯಡಿಯೂರಪ್ಪ ಅವರನ್ನು ಸನ್ಮಾನಿಸಲಿದ್ದಾರೆ ಎಂದರು,
ಈ ಸಂದರ್ಭದಲ್ಲಿ ವಿಭಾಗ ಸಹಾ ಪ್ರಬಾರಿ ಎ.ಮುರಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧುರಿ ಗೀರೀಶ್, ವೆಂಕಟೇಶ್ ಯಾದವ್, ವೀರಶೈವ ಬ್ಯಾಂಕ್ ಅಧ್ಯಕ್ಷರಾದ ಪಟೇಲ್ ಶಿವಕುಮಾರ್, ನಗರಾಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾ ಸಿದ್ದಾಪುರದ ಸುರೇಶ್, ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ, ಎಸ್.ಸಿ.ಮೋರ್ಚಾದ ಅಧ್ಯಕ್ಷ ಪರಶುರಾಮ್, ಗ್ರಾಮಾಂತರ ಅಧ್ಯಕ್ಷ ನಾಗರಾಜ್, ದಗ್ಗೆ ಶಿವಪ್ರಕಾಶ್, ಹನುಮಂತಪ್ಪ ಉಪ್ಪರ್ ಅರುಣ ಮುರುಳಿ ಸೇರಿದಂತೆ ಇತರರು ಭಾಗವಹಿಸಿದ್ದರು.



















