ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಶಾಮನೂರು ಶಿವಶಂಕರಪ್ಪ ಹೇಳಿದ ಮಾತು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಬರೀ ಕಾಂಗ್ರೆಸ್ ನಲ್ಲಿ ಮಾತ್ರವಲ್ಲ ಬಿಜೆಪಿ ನಾಯಕರು ಈ ಬಗ್ಗೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಲಿಂಗಾಯತ ಸಮುದಾಯದವರಿಗೆ ಒಳ್ಳೆ ಸ್ಥಾನಮಾನ ಸಿಗುತ್ತಿಲ್ಲ, ಲಿಂಗಾಯತರು ಯಾಕೆ ಸಿಎಂ ಆಗಬಾರದು ಎಂದು ಕೇಳಿದ್ದರು.
ಇದೀಗ ಶಾಮನೂರು ಶಿವಶಂಕರಪ್ಪ ಅವರ ಮಾತಿಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೆಂಬಲ ಸೂಚಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರಾಧ್ಯಕ್ಷರು. ಇವರ ಈ ಹೇಳಿಕೆಗೆ ಫುಲ್ ಸಪೋರ್ಟ್ ಇದೆ. ಅವರು ಮಾತನಾಡಿರುವುದರಲ್ಲಿ ತಪ್ಪೇನಿಲ್ಲ ಎಂದಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರು, ನಾನು ಎಲ್ಲೂ ಸರ್ಕಾರ ಸರಿ ಇಲ್ಲ ಎಂದಿಲ್ಲ. ಆದರೆ ಕಾಂಗ್ರೆಸ್ ನಿಂದ ವೀರಶೈವ ಲಿಂಗಾಯತರ ಕಡೆಗಣನೆ ಆಗುತ್ತಿದೆ. ನಮ್ಮವರಿಗೆ ಅನ್ಯಾಯವಾದರೆ ಸುಮ್ಮನೆ ಆಗಬೇಕೆ..? ಸರ್ಕಾರಕ್ಕೆ ಎಚ್ಚರಿಕೆ ಕೊಡಬೇಕು. ವೀರಶೈವ ಲಿಂಗಾಯತ ಸಮುದಾಯ ಬಹಳ ದೊಡ್ಡದಿದೆ ಎಂದಿದ್ದರು. ಈ ಮಾತಿಗೆ ಕಾಂಗ್ರೆಸ್ ನಲ್ಲೂ ಇದಕ್ಕೆ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ, ಲಕ್ಷ್ಮೀ ಹೆಬ್ಬಾಳ್ಕರ್ ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಸರ್ಕಾರದಲ್ಲಿ ಲಿಂಗಾಯತ ಮಂತ್ರಿಗಳೇ ಹೆಚ್ಚಾಗಿ ಇದ್ದಾರೆ ಎಂದಿದ್ದಾರೆ.