ನವದೆಹಲಿ: ಇಂದು 2022-23ರ ಸಾಲಿನ ಬಜೆಟ್ ಮಂಡನೆ ಮಾಡಲಾಗುತ್ತಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಈ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಾಲ್ಕನೇ ಬಾರಿ ಯಶಸ್ವಿ ಬಜೆಟ್ ಮಂಡನೆ ಮಾಡಿರುವ ನಿರ್ಮಲಾ ಸೀತರಾಮನ್, ಉದ್ಯೋಗ ಸೃಷ್ಟಿ ಬಗ್ಗೆ ಭರವಸೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ನಾವೆಲ್ಲಾ ಒಮಿಕ್ರಾನ್ ಸಂಕಷ್ಟದಲ್ಲಿದ್ದೇವೆ. 2014 ರಿಂದ ನಮ್ಮ ಸರ್ಕಾರ ಅಧಿಕಾರದಲ್ಲಿದೆ. ಅಂದಿನಿಂದಲೂ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿದ್ದೇವೆ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಶ್ರಮಿಸುತ್ತಿದೆ.
ಇಂದಿನ ಬಜೆಟ್ 25 ವರ್ಷಗಳ ಕಾಲ ಉತ್ತೇಜನ ನೀಡುತ್ತದೆ. 60 ಲಕ್ಷ ಉದ್ಯೋಗ ಸೃಷ್ಟಿಯ ಆತ್ಮನಿರ್ಭರ್ ಭಾರತ್ ಗೆ ಅಭೂತ ಪೂರ್ವ ಸ್ಪಂದನೆ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಇನ್ನೂ 35 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಈಗಾಗಲೇ 25 ವರ್ಷಗಳ ಬ್ಲೂ ಪ್ರಿಂಟ್ ರೆಡಿ ಮಾಡಲಾಗಿದೆ ಎಂದಿದ್ದಾರೆ.