ಬಜೆಟ್: ಮದ್ಯ ಪ್ರಿಯರಿಗೆ ಬಿಗ್ ಶಾಕ್ 

1 Min Read

ರಾಜ್ಯದ ಮದ್ಯ ಪ್ರಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಆಯವ್ಯಯದಲ್ಲಿ ಬಿಗ್ ಶಾಕ್ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಢೀಕರಿಸುವ ಸವಾಲಿನ ನಡುವೆ, ಅಬಕಾರಿ ಸುಂಕವನ್ನು (Excise Duty) ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.ಮದ್ಯದಲ್ಲಿ ಇರುವ ಆಲ್ಕೋಹಾಲ್ ಅಂಶ ಆಧಾರದ ಮೇಲೆ ತೆರಿಗೆ ವಿಧಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ.

ಈ ಹೊಸ ನೀತಿಯ ಪ್ರಕಾರ, ಮದ್ಯದ ಆಲ್ಕೋಹಾಲ್ ಪ್ರಮಾಣ ಹೆಚ್ಚಿದಷ್ಟು ತೆರಿಗೆಯೂ ಹೆಚ್ಚಾಗಲಿದೆ. ಕಡಿಮೆ ಆಲ್ಕೋಹಾಲ್ ಅಂಶವಿರುವ ಮದ್ಯಕ್ಕೆ ಕಡಿಮೆ ತೆರಿಗೆ ವಿಧಿಸಲಾಗುವುದು. ಇದರಿಂದ ಮದ್ಯದ ಬೆಲೆಯಲ್ಲಿ ಹಂತಹಂತವಾಗಿ ಏರಿಕೆ ಆಗುವ ಸಾಧ್ಯತೆ ಇದೆ. ಈ ನಿರ್ಧಾರದ ಹಿಂದಿನ ಉದ್ದೇಶ ಅಬಕಾರಿ ಆದಾಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ, ಹೆಚ್ಚು ಆಲ್ಕೋಹಾಲ್ ಅಂಶವಿರುವ ಮದ್ಯದ ಬಳಕೆಯನ್ನು ನಿಯಂತ್ರಿಸುವುದೂ ಆಗಿದೆ ಎಂದು ಸರ್ಕಾರ ವಿವರಿಸಿದೆ.

ಇನ್ನು ಮುಂದೆ ಎಕ್ಸ್-ಫ್ಯಾಕ್ಟರಿ ದರಪಟ್ಟಿಯ ಆಧಾರದ ಮೇಲೆ ಏಕರೂಪದ ಅಬಕಾರಿ ಸುಂಕವನ್ನು ಹಂತಹಂತವಾಗಿ ಹೆಚ್ಚಿಸಲು ಸರ್ಕಾರ ಯೋಜಿಸಿದೆ. ಇದರಿಂದ ಮದ್ಯದ ಬೆಲೆಯಲ್ಲಿ ಏರುಪೇರು ಆಗುವ ಸೂಚನೆ ಸಿಗುತ್ತಿದೆ.

ಸರ್ಕಾರದ ಈ ನಿರ್ಧಾರವು ಮದ್ಯಪ್ರಿಯರಲ್ಲಿ ಆತಂಕ ಮೂಡಿಸಿದ್ದು, ಬೆಲೆ ಏರಿಕೆಯಿಂದ ಆದಾಯದ ಮೇಲೆ ಪರಿಣಾಮ ಬೀಳಬಹುದು ಎಂಬ ಚಿಂತೆ ವ್ಯಕ್ತವಾಗುತ್ತಿದೆ. ಆದರೆ ಸರ್ಕಾರವು ಇದನ್ನು ರಾಜ್ಯದ ಆದಾಯ ಹೆಚ್ಚಿಸುವ ಮತ್ತು ಆರೋಗ್ಯದ ದೃಷ್ಟಿಯಿಂದಲೂ ಸೂಕ್ತವಾದ ಕ್ರಮ ಎಂದು ವಿವರಿಸಿದೆ.

Share This Article