Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಜೆಟ್ ಸಿದ್ಧತೆ : ಸಿದ್ದರಾಮಯ್ಯ ಅವರಿಗಿರುವ ಸವಾಲುಗಳು ಏನು..?

---Advertisement---

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಲ್ಲಿ ದಾಖಲೆ ಬರೆದಿರುವ ಸಿದ್ದರಾಮಯ್ಯ, ಇದೀಗ ದಾಖಲೆಯ ಬಜೆಟ್ ಮಂಡಿಸೋದಕ್ಕೂ ರೆಡಿಯಾಗಿದ್ದಾರೆ. ಈ ಬಾರಿಯ ಬಜೆಟ್ ಮಂಡನೆಯ ವಿಚಾರಕ್ಕೆ ಸಿದ್ದರಾಮಯ್ಯ ಅವರ ಮುಂದೆಯೂ ಸಾಕಷ್ಟು ಸವಾಲುಗಳು ಇದಾವೆ. 17ನೇ ಬಜೆಟ್ ಮಂಡಿಸಲು ರೆಡಿಯಾಗಿರುವ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸರ್ಕಾರದ ಹೊಸ ವಿಕಸಿತ ಭಾರತ – ಉದ್ಯೋಗ ಮತ್ತು ಜೀವನೋಪಾಯ ಗ್ಯಾರಂಟಿ ಮಿಷನ್ ಯೋಜನೆಗೆ ದೇಶ ವ್ಯಾಪಿಯಾಗಿ 95,692 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.

* ಇದರ ಜೊತೆಗೆ ಯುಪಿಎ ಸರ್ಕಾರ ಮನ್ರೆರವಾ ಯೋಜನೆಗೂ ಹಣ ಮೀಸಲಿಟ್ಟಿರುವ ಹಿನ್ನಲೆಯಲ್ಲಿ, ಹೊಸ ವಿಬಿ ಜಿ ರಾಮ್ ಜಿ ಯೋಜನೆಯನ್ನು ತಿರಸ್ಕರಿಸುವ ಪಕ್ಷದ ನಿಲುವಿಗೆ ಬದ್ಧರಾದರೆ ವರ್ಷಕ್ಕೆ ಸುಮಾರು 4,800 ಕೋಟಿ ರೂಪಾಯಿ ಕೇಂದ್ರ ಅನುದಾನವನ್ನು ತಿರಸ್ಕರಿಸುವ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ.

* 6 ತಿಂಗಳಲ್ಲಿ ಹಂತ ಹಂತವಾಗಿ ಸ್ಥಗಿತಗೊಳ್ಳಲಿರುವ ಮನ್ರೇಗಾ ಯೋಜನೆಗೆ ಹಣ ಒದಗಿಸಬೇಕಾಗಿದೆ. ಮತ್ತೊಂದೆಡೆ ಸಂಸತ್ತಿನಲ್ಲಿ ವಿಧೇಯಕ ಅಂಗೀಕಾರವಾ್ ಬಳಿಕ ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತಿರುವ ಎಬಿ ಜಿ ರಾಮ್ ಜಿ ಯೋಜನೆಗೆ ಅನುದಾನ ನೀಡಬೇಕೆ ಎಂಬುದರ ಕುರಿತು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ.

* ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಈ ಯೋಜನೆಯನ್ನು ರದ್ದುಪಡಿಸುವಂತೆ ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದು, ಇದನ್ನು “ಕಪ್ಪು ಕಾನೂನು” ಹಾಗೂ “ಬಡವರ ವಿರೋಧಿ ಕ್ರಮ” ಎಂದು ಕರೆಯುತ್ತಿದೆ. ಇದರ ಜತೆ, ರಾಜ್ಯ ವಿಧಾನಮಂಡಲ ಹೊಸ ಯೋಜನೆಯನ್ನು ತಿರಸ್ಕರಿಸಿ, ಮನ್ರೇಗಾ ಯೋಜನೆಯನ್ನು ಮುಂದುವರಿಸುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿದೆ.

* ಕರ್ನಾಟಕವೂ ಮನ್ರೇಗಾಕ್ಕೆ ಬಜೆಟ್ ನಲ್ಲಿ ಅನುದಾನ ಒದಗಿಸುವುದರ ಜೊತೆಗೆ ವಿಬಿ-ಜಿ-ರಾಮ್-ಜಿ ಯೋಜನೆಗೂ ಹಣ ಮೀಸಲಿಡಬೇಕಾದ ಪರಿಸ್ಥಿತಿಯಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now