Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಬಜೆಟ್ ಮಂಡನೆ : ಸಿದ್ದರಾಮಯ್ಯ ಹೇಳಿದ್ದೇನು.? ರಾಜ್ಯದ ಬೇಡಿಕೆಗಳೇನು..?

---Advertisement---

ಬೆಂಗಳೂರು: 2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ನಾಳೆ ಮಂಡಿಸಲಾಗುತ್ತದೆ. ಅದಕ್ಕೂ ಮುನ್ನ ರಾಜ್ಯ ಸರ್ಕಾರ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಇದರಲ್ಲಿ ಆರೋಗ್ಯ ಯೋಜನೆ, ಕರ್ನಾಟಕ ರಾಜ್ಯವನ್ನು ಕಡೆಗಣಿಸುತ್ತಿರುವ ವಿಚಾರ, ಸೆಸ್, ಜಿಎಸ್ಟಿ ಸೇರಿದಂತೆ ಹಲವು ಬೇಡಿಕೆಗಳನ್ನು ಕೇಂದ್ರದ ಮುಂದೆ ಇಟ್ಟಿದೆ.

* ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಫಲಾನುಭವಿಗಳಾಗಿರುವ ಎಲ್ಲರಿಗೂ ಆರೋಗ್ಯ ಯೋಜನೆಯನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದೆ.

* ಇಲ್ಲಿಯವರೆಗೂ ಶಿಫಾರಸು ಮಾಡಿರುವ ವಿಶೇಷ ಅನುದಾನ 5,495 ಕೋಟಿ ಮತ್ತು ರಾಜ್ಯ ಕೇಂದ್ರಿತ 6000 ಕೋಟಿ ಮೊತ್ತದ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಶಿಫಾರಸು ಮಾಡಿರುವ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದೆ.

* ರಾಜ್ಯಗಳಿಂದ ವಸೂಲು ಮಾಡುತ್ತಿರುವ ಸೆಸ್ ಮತ್ತು ಸರ್ಚಾರ್ಜ್ ನ ಗಳಲ್ಲಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪಾಲು ನೀಡಲಾಗುತ್ತಿಲ್ಲ. ತಕ್ಷಣದಿಂದಲೇ ಸೆಸ್ ಮತ್ತು ಸರ್ಚಾರ್ಜ್ ರದ್ದುಗೊಳಿಸಬೇಕು ಇಲ್ಲವೇ ತೆರಿಗೆಯ ನಿಧಿಗೆ ಸೇರಿಸಿ ರಾಜ್ಯಗಳಿಗೆ ಹಂಚಬೇಕು.

* ಸೇವಾ ತೆರಿಗೆಯ ಗರಿಷ್ಠ ಮಿತಿಯನ್ನು ಹೆಚ್ಚಿಸಲು ತಿದ್ದುಪಡಿ ಮಾಡಬೇಕಿದೆ.

* ವಿಶೇಷ ನೆರವು ನೀಡುತ್ತಿರುವುದು ಸ್ವಾಗತ. ಆದರೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯಕ್ಕೀಡಾಗಿರುವ ಕರ್ನಾಟಕಕ್ಕೆ ಅತಿ ಕಡಿಮೆ ನೆರವು ಸಿಗುತ್ತಿದೆ. ಈ ಕಾರಣದಿಂದ ವಿಶೇಷ ನೆರವು ಯೋಜನೆಯ ಮಾನದಂಡವನ್ನು ಬದಲಾಯಿಸಬೇಕು.

* ಆಯುಷ್ಮಾನ್ ಭಾರತ್ ಯೋಜನೆಯ ನಿಯಮಾವಳಿಗಳನ್ನು ಬದಲಾಯಿಸಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಫಲಾನುಭವಿಗಳಾಗಿರುವ ಎಲ್ಲರಿಗೂ ಆರೋಗ್ಯ ಸೇವೆಯನ್ನು ವಿಸ್ತರಿಸಬೇಕಿದೆ.

* ಬೆಂಬಲ ಬೆಲೆ ಯೋಜನೆಯಡಿ ಕೇಂದ್ರ ಸರ್ಕಾರದ ‌ನಿಯಮಾವಳಿಗಳಿಗೆ ಅನುಗುಣವಾಗಿ ಕರ್ನಾಟಕ ಸರ್ಕಾರ ರೈತರಿಂದ ಉತ್ಪನ್ನಗಳನ್ನು ಖರೀದಿ ಮಾಡುತ್ತಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೀಡಬೇಕಾದ 2,461,49 ಕೋಟಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂಬುದು ಸೇರಿ ಹಲವು ಬೇಡಿಕೆಗಳನ್ನ ಇಟ್ಟಿದೆ.

ಇನ್ನು ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ ಸರ್ಕಾರ ಕಿವುಡಾಗಿದೆ. ಕೇಂದ್ರ ಸರ್ಕಾರದಿಂದ ನಿರೀಕ್ಷೆ ಮಾಡುವುದೇ ಇಲ್ಲ ಎಂದೇನಿಲ್ಲ. ನಿರೀಕ್ಷೆ ಮಾಡಿದರು ಅವರು ಹುಸಿಯಾಗುತ್ತಿವೆ ಎಂದು ಹೇಳಿದ್ದೇನೆ. ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆಗೆ 5300 ಕೋಟಿ ಅನುದಾನ ಕೊಡುವುದಾಗಿ ಘೋಷಿಸಿದ್ದರು. ಆದರೆ ಇಲ್ಲಿಯವರೆಗೂ ಒಂದು ರೂಪಾಯಿ ಕೊಟ್ಟಿಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment