ಸುದ್ದಿಒನ್, ಚಿತ್ರದುರ್ಗ, ಜೂನ್ 15 : ಭದ್ರಾ ಮೇಲ್ದಂಡೆ ಯೋಜನೆ ಅಡಿ ಚಿತ್ರದುರ್ಗ ನಗರ ಸಮೀಪ ವಾಟರ್ ಅಮ್ಯೂಸ್ಮೆಂಟ್ ಪಾರ್ಕ್ (Water Amusement Park) ನಿರ್ಮಿಸುವಂತೆ ಪಪ್ಪಿಸ್ ಸ್ಟಡೆಂಟ್ ವಿಂಗ್ ಕಾರ್ಯಕರ್ತರು ಸೋಮವಾರ ಭದ್ರಾ ಮೇಲ್ದಂಡೆ ಯೋಜನೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಿರಣ್ ಕುಮಾರ್.ಜಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಚಿತ್ರದುರ್ಗ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪ್ರವಾಸೋದ್ಯಮ, ಮನರಂಜನೆ ಮತ್ತು ಸ್ಥಳೀಯ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಭದ್ರಾ ಮೇಲ್ದಂಡೆ ಯೋಜನೆ ಅಡಿ ಚಿತ್ರದುರ್ಗ ನಗರ ಸಮೀಪ ಆಧುನಿಕ ಸೌಲಭ್ಯಗಳನ್ನು ಒಳಗೊಂಡ ವಾಟರ್ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸಬೇಕು ಹಾಗೂ ಯೋಜನೆಯಿಂದ ಜಿಲ್ಲೆಯ ಯುವಜನರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗುವುದರ ಜೊತೆಗೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರನ್ನು ಆಕರ್ಷಿಸಲು ಸಾಧ್ಯವಾಗುತ್ತದೆ. ಅಲ್ಲದೆ, ಚಿತ್ರದುರ್ಗ ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಅಯಾಮ ದೊರೆತು ಸ್ಥಳೀಯ ವ್ಯಾಪಾರ ಹಾಗೂ ಸೇವಾ ವಲಯಗಳ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಯಡಿ ಸೂಕ ಜಾಗ ಗುರುತಿಸಿ, 5 ಕೋಟಿಗಳ ಅನುದಾನ ಮಂಜೂರು ಮಾಡಿ ವಾಟರ್ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸಬೇಕೆಂದು ಪಪ್ಪಿಸ್ ಸ್ಟಡೆಂಟ್ ವಿಂಗ್ ಅಧ್ಯಕ್ಷ ಚಿನ್ನು ಭದ್ರಾ ಮೇಲ್ದಂಡೆ ಯೋಜನೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಿರಣ್ ಕುಮಾರ್.ಜಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಪಪ್ಪಿಸ್ ಸ್ಟುಡೆಂಟ್ ವಿಂಗ್ ಕಾರ್ಯದರ್ಶಿ ಸಲೀಂ ಇದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















