Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ ಟೋಲ್‍ಗೇಟ್‍ನಿಂದ ಆರ್.ಟಿ.ಓ. ಆಫೀಸ್ ರಸ್ತೆವರೆಗೆ ಹೆದ್ದಾರಿಯಲ್ಲಿ ಫೈಓವರ್ ನಿರ್ಮಿಸಿ : ಕರುನಾಡ ವಿಜಯಸೇನೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, 
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್.25  : ಚಳ್ಳಕೆರೆ ಟೋಲ್‍ಗೇಟ್‍ನಿಂದ ಆರ್.ಟಿ.ಓ. ಆಫೀಸ್ ರಸ್ತೆವರೆಗೆ ಹೆದ್ದಾರಿಯಲ್ಲಿ ಕೂಡಲೆ ಫೈಓವರ್ ನಿರ್ಮಿಸುವಂತೆ ಕರುನಾಡ ವಿಜಯಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಕಚೇರಿ ಸಹಾಯಕರಿಗೆ ಮನವಿ ಸಲ್ಲಿಸಿದರು.

ಡಾನ್‍ಬೋಸ್ಕೋ ಶಾಲೆ, ಬಸವೇಶ್ವರ ಆಸ್ಪತ್ರೆ, ಲಕ್ಷ್ಮಿವೆಂಕಟೇಶ್ವರ ಶಾಲಾ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳು ಇರುವುದರಿಂದ ಹೆದ್ದಾರಿ ದಾಟಿ ಬರಬೇಕಾಗುವ ಸಂದರ್ಭದಲ್ಲಿ ಅನೇಕ ಅಪಘಾತಗಳಾಗಿ ಸಾವು-ನೋವು ಸಂಭವಿಸುತ್ತಿರುವುದರಿಂದ ಇಲ್ಲಿ ಫೈಓವರ್ ನಿರ್ಮಾಣ ಮಾಡಿ ಅಮೂಲ್ಯವಾದ ಪ್ರಾಣಗಳನ್ನು ಕಾಪಾಡಬೇಕಾಗಿದೆ. ಬಸವೇಶ್ವರ ಆಸ್ಪತ್ರೆ ಹಾಗೂ ಡಾನ್‍ಬೋಸ್ಕೋ ಶಾಲೆಗೆ ಬರುವವರು ಜೀವ ಕೈಯಲ್ಲಿ ಹಿಡಿದುಕೊಳ್ಳುವಂತಾಗಿದೆ. ಇಲ್ಲಿ ನಡೆಯುವ ಅನಾಹುತಗಳಿಗೆ ರಾಷ್ಟ್ರೀಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಹತ್ತು ದಿನಗಳೊಳಗೆ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಎಚ್ಚರಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಉಪಾಧ್ಯಕ್ಷೆ ರತ್ನಮ್ಮ, ರಾಜ್ಯ ಸಮಿತಿಯ ನಿಸಾರ್ ಅಹಮದ್, ಸಂಚಾಲಕ ಹರೀಶ್‍ಕುಮಾರ್, ಯುವ ಘಟಕದ ಅಧ್ಯಕ್ಷ ನಾಗರಾಜ್‍ಮುತ್ತು, ನಾಗೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment