Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಯೋಧ್ಯೆಯಲ್ಲಿ ರಾಮಮಂದಿರದ ಜೊತೆಗೆ ಮಹರ್ಷಿ ವಾಲ್ಮೀಕಿ ಮಂದಿರ ನಿರ್ಮಿಸಿ : ಚಿತ್ರನಾಯಕ ವೇದಿಕೆ ಒತ್ತಾಯ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.10 : ಅಯೋಧ್ಯೆಯಲ್ಲಿ ಇದೆ ತಿಂಗಳ 22 ರಂದು ರಾಮ ಮಂದಿರ ಉದ್ಗಾಟನೆಯಾಗುತ್ತಿರುವುದರ ಜೊತೆಯಲ್ಲಿಯೇ ಮಹರ್ಷಿ ವಾಲ್ಮೀಕಿಯವರ ಮಂದಿರ ನಿರ್ಮಾಣವಾಗಬೇಕೆಂದು ಚಿತ್ರನಾಯಕ ವೇದಿಕೆ ಅಧ್ಯಕ್ಷ ಪ್ರಶಾಂತ್‍ಕುಮಾರ್ ಕೆ.ಟಿ. ಉತ್ತರಪ್ರದೇಶ ಹಾಗೂ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ನಿಲ್ದಾಣವೆಂದು ನಾಮಕರಣ ಮಾಡಿರುವುದನ್ನು ಸ್ವಾಗತಿಸುತ್ತೇವೆ. ಹಿಂದೂ ಧರ್ಮದ ಮಹಾನ್ ಗ್ರಂಥ ರಾಮಾಯಣ ಬರೆದಿರುವುದು ವಾಲ್ಮೀಕಿ. ರಾಮ ಮಂದಿರ ನಿರ್ಮಾಣವಾಗುತ್ತಿರುವ ಈ ಸಂದರ್ಭದಲ್ಲಿ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹಾಗೂ ಭೋಜನಾಲಯಕ್ಕೆ ಶಬರಿ ಎಂದು ನಾಮಕರಣ ಮಾಡಿರುವುದು ನಿಜಕ್ಕೂ ಇವರಿಗೆ ಸಂದಿರುವ ಗೌರವ. ಹಾಗಾಗಿ ಪ್ರಧಾನಿ ನರೇಂದ್ರಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರವರು ರಾಮನಿಗೆ ನೀಡಿದಷ್ಟು ಗೌರವವನ್ನು ಮಹರ್ಷಿ ವಾಲ್ಮೀಕಿಗೂ ನೀಡಬೇಕೆಂದು ಪ್ರಶಾಂತ್‍ಕುಮಾರ್ ಕೆ.ಟಿ. ಮನವಿ ಮಾಡಿದರು.

ಗೌರಿ ರಾಜ್‍ಕುಮಾರ್, ಪ್ರಶಾಂತ್, ಬೋರಯ್ಯ ಬಚ್ಚಬೋರನಹಟ್ಟಿ, ಬಸವರಾಜ್, ನ್ಯಾಯವಾದಿ ಅಶೋಕ್ ಬೆಳಗಟ್ಟ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment