ಮಳೆಗೆ ಹಳೇ ಕಟ್ಟಡ ಕುಸಿತ, ನೆಲಸಮಗೊಳಿಸಲು ಕ್ರಮ : ಆಯುಕ್ತ ಗೌರವ್‌ ಗುಪ್ತ

1 Min Read

ಬೆಂಗಳೂರು : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಹಳೇ ಕಟ್ಟಡಗಳು ಕುಸಿಯುತ್ತಿದ್ದು, ಅಕ್ಕಪಕ್ಕದವರಿಗೆ ಆತಂಕ ಮೂಡಿಸಿದೆ. ಹಲಸೂರು ವಾರ್ಡ್ ವ್ಯಾಪ್ತಿಯ ಮಿಲ್ಕ್ ಮ್ಯಾನ್ ಸ್ಟ್ರೀಟ್ ನಲ್ಲೂ ಕಟ್ಟಡವೊಂದು ಕುಸಿದಿದೆ.

ಇಂದು ಮುಂಜಾನೆ 6 ಗಂಟೆಗೆ ಈ ಘಟನೆ ನಡೆದಿದೆ. 58 ವರ್ಷಗಳ ಹಳೆಯ ಕಟ್ಟಡ ಕುಸಿದು ಬಿದ್ದಿದೆ.‌ ಬಿಬಿಎಂಪಿಯ ಆಯುಕ್ತ ಗೌರವ್‌ ಗುಪ್ತ ಅವರು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 

ನೆಲ ಮತ್ತು ಮೊದಲ ಮಹಡಿಯನ್ನೊಳಗೊಂಡಿರುವ ಸುಮಾರು 20 ಚದುರದ ಅಡಿ ಕಟ್ಟಡವು ಕುಸಿದಿದ್ದು, ಈ ಕಟ್ಟಡವನ್ನು ಮಣ್ಣು ಹಾಗೂ ಇಟ್ಟಿಗೆಯಿಂದ ನಿರ್ಮಿಸಲಾಗಿದೆ. ಶಿಥಿಲಗೊಂಡಿದ್ದ ಕಟ್ಟಡಕ್ಕೆ ಪಾಲಿಕೆ ಈಗಾಗಲೇ ನೋಟಿಸ್ ನೀಡಿ ಮಾಲೀಕರಿಗೆ ಮುಂಚಿತವಾಗಿ ಎಚ್ಚರಿಕೆ ನೀಡಲಾಗಿತ್ತು.

ಕಟ್ಟಡ ಕುಸಿದ ವೇಳೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಡ ತ್ಯಾಜ್ಯ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಇದೇ ಸ್ಥಳದಲ್ಲಿ ಇನ್ನೆರಡು ಕಟ್ಟಡಗಳು ಶಿಥಿಲಗೊಂಡಿದ್ದು, ಅವುಗಳನ್ನು ಕೂಡಾ ಇಂದು ನೆಲಸಮಗೊಳಿಸಲಾಗುವುದು ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *