ಬೆಂಗಳೂರು : ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಹಳೇ ಕಟ್ಟಡಗಳು ಕುಸಿಯುತ್ತಿದ್ದು, ಅಕ್ಕಪಕ್ಕದವರಿಗೆ ಆತಂಕ ಮೂಡಿಸಿದೆ. ಹಲಸೂರು ವಾರ್ಡ್ ವ್ಯಾಪ್ತಿಯ ಮಿಲ್ಕ್ ಮ್ಯಾನ್ ಸ್ಟ್ರೀಟ್ ನಲ್ಲೂ ಕಟ್ಟಡವೊಂದು ಕುಸಿದಿದೆ.
ಇಂದು ಮುಂಜಾನೆ 6 ಗಂಟೆಗೆ ಈ ಘಟನೆ ನಡೆದಿದೆ. 58 ವರ್ಷಗಳ ಹಳೆಯ ಕಟ್ಟಡ ಕುಸಿದು ಬಿದ್ದಿದೆ. ಬಿಬಿಎಂಪಿಯ ಆಯುಕ್ತ ಗೌರವ್ ಗುಪ್ತ ಅವರು ಬೆಳಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನೆಲ ಮತ್ತು ಮೊದಲ ಮಹಡಿಯನ್ನೊಳಗೊಂಡಿರುವ ಸುಮಾರು 20 ಚದುರದ ಅಡಿ ಕಟ್ಟಡವು ಕುಸಿದಿದ್ದು, ಈ ಕಟ್ಟಡವನ್ನು ಮಣ್ಣು ಹಾಗೂ ಇಟ್ಟಿಗೆಯಿಂದ ನಿರ್ಮಿಸಲಾಗಿದೆ. ಶಿಥಿಲಗೊಂಡಿದ್ದ ಕಟ್ಟಡಕ್ಕೆ ಪಾಲಿಕೆ ಈಗಾಗಲೇ ನೋಟಿಸ್ ನೀಡಿ ಮಾಲೀಕರಿಗೆ ಮುಂಚಿತವಾಗಿ ಎಚ್ಚರಿಕೆ ನೀಡಲಾಗಿತ್ತು.
ಕಟ್ಟಡ ಕುಸಿದ ವೇಳೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಟ್ಟಡ ತ್ಯಾಜ್ಯ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಇದೇ ಸ್ಥಳದಲ್ಲಿ ಇನ್ನೆರಡು ಕಟ್ಟಡಗಳು ಶಿಥಿಲಗೊಂಡಿದ್ದು, ಅವುಗಳನ್ನು ಕೂಡಾ ಇಂದು ನೆಲಸಮಗೊಳಿಸಲಾಗುವುದು ಎಂದು ಮುಖ್ಯ ಆಯುಕ್ತರು ತಿಳಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…