Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

9ನೇ ತರಗತಿ‌ ಮಕ್ಕಳಿಗೆ ಬಂಪರ್ ಆಫರ್ ; ಬಾಹ್ಯಾಕಾಶದಲ್ಲಿ ಆಸಕ್ತಿ ಇದ್ದರೆ ಇಲ್ಲಿದೆ ಅವಕಾಶ

---Advertisement---

ಬೆಂಗಳೂರು; ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಿಗೆ ದೊಡ್ಡ ಕನಸಿರುತ್ತದೆ. ಪೋಷಕರ ಆಸೆಯಂತೆ ಮಕ್ಕಳು ನಡೆದುಕೊಳ್ಳುವುದು ಸಾಮಾನ್ಯ. ಬಾಹ್ಯಾಕಾಶದಲ್ಲಿ ಆಸಕ್ತಿ ಹೊಂದಿರುವ ಮಕ್ಕಳಿಗೆ ಇಸ್ರೋ ಸಂಸ್ಥೆ ದೊಡ್ಡ ಅವಕಾಶವೊಂದನ್ನ ನೀಡಿದೆ. ಈ ಸುದ್ದಿ ಓದಿ ಇದರ ಸದುಪಯೋಗ ಪಡೆದುಕೊಳ್ಳಬಹುದು.

 

ಇಸ್ರೋ ಸಂಸ್ಥೆಯು ಯುವ ವಿಜ್ಞಾನಿ ಕಾರ್ಯಕ್ರಮ, ಯುವಿಕಾ 2025ರ ಮೂಲಕ ಮಕ್ಕಳ ಕನಸ್ಸನ್ನ ಪೂರ್ತಿ ಮಾಡುವುದಕ್ಕೆ ಹೊರಟಿದೆ. ಈಗಾಗಲೇ ನೋಂದಣಿ ಕೂಡ ಆರಂಭವಾಗಿದೆ. ಈ ಕಾರ್ಯಕ್ರಮದ ಮೂಲಕ ಶಾಲಾ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನವನ್ನು ಪ್ರಾಯೋಗಿಕವಾಗಿ ಅನುಭವಿಸಲು ಅವಕಾಶ ನೀಡಲಿದೆ. ಹೀಗಾಗಿ ಆಸಕ್ತಿ ಇರುವ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಪ್ರಸ್ತುತ 9ನೇ ತರಗತಿಯಲ್ಲಿರುವ ಮಕ್ಕಳಿಗಾಗಿ ವಿನ್ಯಾಸಗೊಳಿಸಿರುವ ಕಾರ್ಯಕ್ರಮ ಇದಾಗಿದೆ. ಭವಿಷ್ಯದಲ್ಲಿ STEM (ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ) ವೃತ್ತಿಜೀವನವನ್ನು ಮುಂದುವರಿಸಲು ವಿದ್ಯಾರ್ಥಿಗಳನ್ನು ಪ್ರೇರೇಪಿಸುವುದು ಇಸ್ರೋದ ಧ್ಯೇಯದ ಭಾಗವಾಗಿದೆ.

ಬೇರೆ ಜಿಲ್ಲೆಯ ವಿದ್ಯಾರ್ಥಿಗಳ ಗಮನಕ್ಕೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಯಸುವ ಮಕ್ಕಳಿಗೆ ಊಟ, ವಸತಿ, ಅಧ್ಯಯನ ಸಾಮಾಗ್ರಿಗಳು ಸೇರಿದಂತೆ ಎಲ್ಲಾ ಸೌಲಭ್ಯವನ್ನು ಒದಗಿಸುತ್ತದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು, ಭಾರತದಾದ್ಯಂತ ಯಾವುದೇ ಶಾಲೆಯಲ್ಲಿ ಜನವರಿ 1, 2025ರ ಸಾಲಿನಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ರಿಜಿಸ್ಟರ್‌ ಮಾಡಿಕೊಳ್ಳಬಹುದು. ಆಯ್ಕೆಯು ಶೈಕ್ಷಣಿಕ ಸಾಧನೆ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಆಧರಿಸಿರುತ್ತದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ. ನೋಂದಣಿಗಳು ಫೆಬ್ರವರಿ 24, 2025ರಂದು ಪ್ರಾರಂಭವಾಗಿದ್ದು ಮಾರ್ಚ್ 23, 2025ರಂದು ಮುಕ್ತಾಯಗೊಳ್ಳುತ್ತವೆ. ಮೊದಲ ಆಯ್ಕೆ ಪಟ್ಟಿಯನ್ನು ಏಪ್ರಿಲ್ 7, 2025ರಂದು ಬಿಡುಗಡೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳು ಮೇ 18, 2025ರಂದು ಇಸ್ರೋ ಕೇಂದ್ರಗಳಿಗೆ ವರದಿ ಮಾಡಬೇಕು. ಇಸ್ರೋದ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಯೂ ಅದೇ ವೆಬ್ಸೈಟ್ ನಲ್ಲಿ ಸಿಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment