ಶಿವಮೊಗ್ಗ: ಜಿಲ್ಲೆಯ ಸಾಗರದ ಬಳಿ ಎರಡು ಖಾಸಗಿ ಬಸ್ ಗಳು ಮುಖಾಮುಖಿಯಾದ ಹಿನ್ನೆಲೆ ಅಪಘಾತ ಸಂಭವಿಸಿದೆ. ಎರಡು ಬಸ್ ಗಳು ಗುದ್ದಿಕೊಂಡ ರಭಸಕ್ಕೆ ಆರು ಮಂದಿ ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.
ಬಸ್ ನಲ್ಲಿದ್ದ ನಾಲ್ಕು ಪ್ರಯಾಣಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ. ಪ್ರಯಾಣಿಕರಿಗೆ ಗಂಭೀರ ಗಾಯವಾಗಿದ್ದು, ತಕ್ಷಣ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ.
ಈ ಪ್ರಕರಣ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಜನರನ್ನು ರಕ್ಷಣೆ ಮಾಡುವಲ್ಲಿ ನಿರತರಾಗಿದ್ದಾರೆ. ಇನ್ನು ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.