Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿನ್ನ ಖರೀದಿ ಮಾಡೋ ಮಹಿಳೆಯರಿಗೆ ಶಾಕ್ : ಭರ್ಜರಿ ಏರಿಕೆಯಾಯ್ತು ಲೋಹ..!

---Advertisement---

ಬೆಂಗಳೂರು:  ಚಿನ್ನದ ಬೆಲೆಯಂತೂ ದಿನೇ ದಿನೇ ಚಿನ್ನ ಬೆಳ್ಳಿ ಎರಡರಲ್ಲೂ ಸಿಕ್ಕಾಪಟ್ಟೆ ಏರಿಕೆಯಾಗುತ್ತಲೇ ಇದೆ. ಇಂದು ಕೂಡ ಏರಿಕೆಯಾಗಿದ್ದು, ಒಂದೇ ದಿ‌ನ 120 ರೂಪಾಯಿ ಏರಿಕೆಯಾಗಿದೆ. ಈ ಮೂಲಕ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರ 22 ಕ್ಯಾರಟ್ ನ ಒಂದು ಗ್ರಾಂ 7,730 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನದ ದರದಲ್ಲೂ 131 ರೂಪಾಯಿ ಏರಿಕೆಯಾಗಿದ್ದು, 8,433 ರೂಪಾಯಿ ಇದೆ. 22 ಕ್ಯಾರಟ್ ಹತ್ತು ಗ್ರಾಂಗೆ 77,300 ರೂಪಾಯಿ ಆಗಿದೆ. ಹಾಗೇ 24 ಕ್ಯಾರಟ್ ಅಪರಂಜಿ ಚಿನ್ನ 84,330 ರೂಪಾಯಿ ಆಗಿದೆ.

 

ಬೆಂಗಳೂರು ಸೇರಿದಂತೆ ಬೇರೆ ಬೇರೆ ನಗರದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಮಾಹಿತಿಯನ್ನು ನೋಡುವುದಾದರೆ, ಬೆಂಗಳೂರು, ಚೆನ್ನೈ, ಕೇರಳ, ಹೈದ್ರಾಬಾದ್, ಕೊಲ್ಕತ್ತಾ, ಮುಂಬೈ ನಗರದಲ್ಲಿ 77,300 ರೂಪಾಯಿ ಒಂದು ಗ್ರಾಂ ಚಿನ್ನದ ಬೆಲೆಯಾಗಿದೆ. ದಿಲ್ಲಿಯಲ್ಲಿ 77,450 ರೂಪಾಯಿ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ದರ ಹೀಗಿದೆ. ದುಬೈನಲ್ಲಿ 10 ಗ್ರಾಂನ 22 ಕ್ಯಾರಟ್ ಚಿನ್ನ 73,660 ರೂಪಾಯಿ ಇದೆ. ಅಮೆರಿಕಾದಲ್ಲಿ 67,590 ಇದೆ. ಸೌದಿಯಲ್ಲಿ 73,690 ಇದೆ.

 

ಇನ್ನು ಬೆಳ್ಳಿ ಬೆಲೆಯಲ್ಲೂ 1 ರೂಪಾಯಿ ಏರಿಕೆಯಾಗಿದ್ದು, ಇಂದಿನ ಮಾರುಕಟ್ಟೆಯಲ್ಲಿ ಒಂದು ಗ್ರಾಂ ಬೆಳ್ಳಿ ಬೆಲೆ 99.50 ರೂಪಾಯಿ ಆಗಿದೆ. ಹಾಗೇ 100 ಗ್ರಾಂ ಬೆಳ್ಳಿಯ ಬೆಲೆ 9,950 ರೂಪಾಯಿ ಇದೆ. ಚೆನ್ನೈ, ದೆಹಲಿ, ಕೊಲ್ಕತ್ತಾ, ಅಹ್ಮದಾಬಾದ್, ಜೈಪುರ, ಲಕ್ನೋ, ಪುಣೆ ನಗರದಲ್ಲಿ ಬೆಳ್ಳಿಯ ಬೆಲೆ 9,950 ಇದ್ರೆ, ಕೇರಳ, ಭುವನೇಶ್ವರ, ಚೆನ್ನೈನಲ್ಲಿ 10,700 ರೂಪಾಯಿ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...