Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜುಲೈ 26 ರಂದು ಬಹುಜನ ಸಮಾಜ ಪಾರ್ಟಿಯಿಂದ ಸರ್ಕಾರಗಳ ವಿರುದ್ಧ ಪ್ರತಿಭಟನೆ : ಎನ್.ಪ್ರಕಾಶ್

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 23 : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿರುವ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ವಿರುದ್ದ ಜುಲೈ 26 ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಿಗ್ಗೆ 11-30 ಕ್ಕೆ ಪ್ರತಿಭಟನೆ ನಡೆಸಲಾಗುವುದೆಂದು ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷ ಎನ್.ಪ್ರಕಾಶ್ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023-24 ಮತ್ತು 25 ನೇ ಸಾಲಿಗೆ ಬಳಸಬೇಕಾಗಿದ್ದ ಎಸ್.ಸಿ.ಪಿ. ಟಿ.ಎಸ್ಪಿ. ಹಣ 25 ಸಾವಿರದ 39 ಕೋಟಿ ರೂ.ಗಳನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರಿಗೆ ದ್ರೋಹವೆಸಗಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಸ್ ಪಕ್ಷಗಳು ಇದುವರೆವಿಗೂ ಎಪ್ಪತ್ತು ಸಾವಿರ ಕೋಟಿ ರೂ.ಗಳನ್ನು ದುರುಪಯೋಗಪಡಿಸಿಕೊಂಡಿರುವುದರ ವಿರುದ್ದ ನಮ್ಮ ಪ್ರತಿಭಟನೆ ಎಂದು ಹೇಳಿದರು.

ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಎಸ್ಸಿ.ಎಸ್ಟಿ. ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಬಹುದಿತ್ತು. ಲಕ್ಷಾಂತರ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ನೀಡಬೇಕಾಗಿದ್ದ ಹಣ ಅನ್ಯ ಉದ್ದೇಶಗಳಿಗೆ ಬಳಕೆಯಾಗಿದೆ. ಮನೆಯಿಲ್ಲದವರಿಗೆ ಸುಸಜ್ಜಿತವಾದ ಮನೆಗಳನ್ನು ನಿರ್ಮಿಸಿಲ್ಲ. ಭೂರಹಿತ ಎಸ್ಸಿ. ಎಸ್ಟಿ.ಗಳಿಗೆ ತಲಾ ಐದು ಎಕರೆ ಕೃಷಿ ಜಮೀನು ನೀಡಬಹುದು. ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಎಲ್ಲಾ ರೀತಿಯ ಕಾಯಿಲೆಗಳಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಅವಕಾಶವಿದೆ. ಇದ್ಯಾವುದನ್ನು ಮಾಡದ ಮೂರು ಪಕ್ಷಗಳಿಗೆ ನಮ್ಮ ಹಣವನ್ನು ಬಳಸಿಕೊಳ್ಳುವ ಅಧಿಕಾರವಿಲ್ಲವೆಂದು ಎಚ್ಚರಿಸುವುದಕ್ಕಾಗಿ ಹಮ್ಮಿಕೊಳ್ಳಲಾಗಿರುವ ಪ್ರತಿಭಟನೆಯಲ್ಲಿ ಎಸ್ಸಿ.ಎಸ್ಟಿ.ಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಎನ್.ಪ್ರಕಾಶ್ ಮನವಿ ಮಾಡಿದ್ದಾರೆ.

ಬಹುಜನ ಸಮಾಜ ಪಾರ್ಟಿ ಜಿಲ್ಲಾ ಸಂಯೋಜಕ ಕೆ.ಎನ್.ದೊಡ್ಡೆಟ್ಟಪ್ಪ, ಉಪಾಧ್ಯಕ್ಷ ರಾಮಸ್ವಾಮಿ, ಪ್ರಧಾನ ಕಾರ್ಯದರ್ಶಿ ಓ.ಹನುಮಂತರಾಯ, ಕಾರ್ಯದರ್ಶಿಗಳಾದ ಜಗದೀಶ್, ಹೆಚ್.ಆರ್.ಶ್ರೀನಿವಾಸ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ಮಹಲಿಂಗಪ್ಪ, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷೆ ಲಕ್ಷ್ಮಕ್ಕ, ಮೊಳಕಾಲ್ಮುರು ತಾಲ್ಲೂಕು ಅಧ್ಯಕ್ಷ ಮರಿಸ್ವಾಮಿ,  ಚಳ್ಳಕೆರೆ ತಾಲ್ಲೂಕು ಸಂಯೋಜಕ ಯು.ನರಸಿಂಹಮೂರ್ತಿ, ಗೋವಿಂದಪ್ಪ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಗೋಲ್ಡ್ ರೇಟ್ ಇಂದು ಕೂಡ ಹೆಚ್ಚಳ : ಗ್ರಾಂಗೆ ಎಷ್ಟು ಏರಿಕೆ ಆಯ್ತು..?

ಬೆಂಗಳೂರು: ಚಿನ್ನ ಬೆಳ್ಳಿಯ ಬೆಲೆಯಲ್ಲಿ ಹಾವು ಏಣಿಯ ಆಟ ಕೆಲ ದಿನದಿಂದ ಕಾಣಿಸ್ತಾ ಇದೆ. ಹಾವು ಮೇಲೇರಿದಂತೆ ಚಿನ್ನದ ಬೆಲೆ ಸರಸರನೆ ಏರುತ್ತಲೆ ಇದೆ. ಇಂದು ಕೂಡ ಇಳಿಕೆಯಾಗದೆ ಏರಿಕೆಯತ್ತಲೇ ಮುಖ ಮಾಡಿದೆ. ಹಾಗಾದ್ರೆ

ಬಿಗ್ ಬಾಸ್ ಮನೆಯಲ್ಲಿ ಅಣ್ಣ-ತಂಗಿ ಯುದ್ಧ : ಶಿಶಿರ್ ಗೆ ಸವಾಲು ಹಾಕಿದ ಚೈತ್ರಾ..!

ಬಿಗ್ ಬಾಸ್ ಕನ್ನಡ ಸೀಸನ್ 11 ನಲ್ಲಿ ಶಿಶಿರ್ ಹಾಗೂ ಚೈತ್ರಾ ಅಣ್ಣ ತಂಗಿಯಂತೆ. ಚೈತ್ರಾ ಕುಗ್ಗಿದಾಗೆಲ್ಲ ಶಿಶಿರ್ ಧೈರ್ಯ ತುಂಬಿದ್ದಾರೆ. ಅದಕ್ಕಾಗಿಯೇ ಬಿಗ್ ಬಾಸ್ ತಂಗಿ ನಿನಗಾಗಿ ಎಂಬ ಫೋಸ್ಟರ್ ಅನ್ನೇ ರಿಲೀಸ್

ಬ್ಯಾಂಕ್‍ಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮದಾನ

ಚಿತ್ರದುರ್ಗ. ನ.21: ಸರ್ಕಾರ ಬಡವರಿಗಾಗಿ ರೂಪಿಸಿರುವ ಸಹಾಯಧನ ಹಾಗೂ ಸಾಲ ಸೌಲಭ್ಯದ ಸ್ಕೀಂಗಳನ್ನು ಜಾರಿ ಮಾಡುವಲ್ಲಿ ನಿರ್ಲಕ್ಷ್ಯ ತೋರುವ ಬ್ಯಾಂಕುಗಳ ಕಾರ್ಯವೈಖರಿಗೆ ಸಂಸದ ಗೋವಿಂದ ಎಂ ಕಾರಜೋಳ ಅಸಮಾಧಾನ ವ್ಯಕ್ತಪಡಿಸಿದರು. ಇದೇ ಪರಿಸ್ಥಿತಿ ಮುಂದುವರೆದರೆ

error: Content is protected !!