Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಉಪಚುನಾವಣೆ:ಯತ್ನಾಳ್‌ ಬಂದರೂ ಸ್ವಾಗತ – ಕುತೂಹಲ ಮೂಡಿಸಿದ ಯಡಿಯೂರಪ್ಪ ಹೇಳಿಕೆ

---Advertisement---

 

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ, ಅಭ್ಯರ್ಥಿಗಳ ಪರವಾಗಿ ಯಾರೇ ಬಂದು ಪ್ರಚಾರ ನಡೆಸಿದರೂ ಸ್ವಾಗತಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಚ್ಛಾಟಿತ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಯಾರೇ ಪ್ರಚಾರಕ್ಕೆ ಬಂದರೂ ಯಾವುದೇ ವಿರೋಧವಿಲ್ಲ ಎಂದು ಸ್ಪಷ್ಟಪಡಿಸಿದರು. “ನಮಗೆ ಗೆಲುವು ಮುಖ್ಯ, ಆದ್ದರಿಂದ ಯಾರೇ ಪ್ರಚಾರ ಮಾಡಿದರೂ ಸ್ವಾಗತಿಸುತ್ತೇವೆ” ಎಂದು ಹೇಳಿದರು.ತಮ್ಮ ಪ್ರಚಾರ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದ ಅವರು, ದಾವಣಗೆರೆಯಲ್ಲಿ ಇಂದಿನಿಂದಲೇ ಪ್ರಚಾರ ನಡೆಸಲಿದ್ದು, ಏಪ್ರಿಲ್ 5 ಮತ್ತು 6ರಂದು ಬಾಗಲಕೋಟೆಯಲ್ಲಿ ಪಕ್ಷದ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡುವುದಾಗಿ ತಿಳಿಸಿದರು.

ಎರಡೂ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯ ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಯಡಿಯೂರಪ್ಪ, “ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನಹಿತ ಮರೆತು ಆಡಳಿತ ನಡೆಸುತ್ತಿದ್ದಾರೆ” ಎಂದು ಟೀಕಿಸಿದರು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಭಯದಿಂದಲೇ ಸರ್ಕಾರದ ಹಿರಿಯ ನಾಯಕರು ಕ್ಷೇತ್ರಗಳಲ್ಲಿ ತಂಗಿದ್ದಾರೆ ಎಂದು ಆರೋಪಿಸಿದರು.ಹಿಂದಿ ಭಾಷೆ ಕುರಿತಾಗಿ ಮಾತನಾಡಿದ ಅವರು, “ಹಿಂದಿ ಕಲಿಯುವುದರಿಂದ ಕನ್ನಡಕ್ಕೆ ಯಾವುದೇ ಧಕ್ಕೆಯಿಲ್ಲ. ಭಾಷಾ ವಿಷಯದಲ್ಲಿ ಗೊಂದಲ ಸೃಷ್ಟಿಸುವುದು ಸರಿಯಲ್ಲ” ಎಂದು ಹೇಳಿದರು. ಉಪಚುನಾವಣೆ ಕಣ ಗರಿಗೆದರಿರುವ ನಡುವೆ ರಾಜಕೀಯ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿವೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...