Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಪಚುನಾವಣೆ:  ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಲಕ್ಷ ಗಟ್ಟಲೇ ಹಣ ಜಪ್ತಿ!

---Advertisement---

ಬಾಗಲಕೋಟೆ : ಬಾಗಲಕೋಟೆ ಉಪಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರಗೊಳ್ಳುತ್ತಿರುವ ನಡುವೆಯೇ ಅಕ್ರಮ ನಗದು ಸಾಗಾಟ ಪ್ರಕರಣ ಪತ್ತೆಯಾಗಿ ಚರ್ಚೆಗೆ ಗ್ರಾಸವಾಗಿದೆ.

ಹೊನ್ನಾಕಟ್ಟಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸುತ್ತಿದ್ದ ಪೊಲೀಸರು, ಮಾರುತಿ ಎರ್ಟಿಗಾ ಕಾರಿನಲ್ಲಿ ಯಾವುದೇ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ₹32.50 ಲಕ್ಷ ನಗದನ್ನು ಜಪ್ತಿ ಮಾಡಿದ್ದಾರೆ. ಈ ಹಣ ರಾಯಚೂರಿನ ಬಿ. ವೀರೇಶ್ ಬಾಬು ಅವರಿಗೆ ಸೇರಿದ್ದು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ರಾಯಚೂರಿನಿಂದ ಬೆಳಗಾವಿ ಕಡೆಗೆ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಈ ನಗದು ಕುರಿತು ಸೂಕ್ತ ದಾಖಲೆಗಳನ್ನು ಒದಗಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣವೇ ಹಣವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ರಾಜ್ಯದಲ್ಲಿ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಅಕ್ರಮ ಹಣ ಸಾಗಾಟ ಮತ್ತು ಮತದಾರರಿಗೆ ಆಮಿಷ ಒಡ್ಡುವ ಪ್ರಯತ್ನಗಳನ್ನು ತಡೆಯಲು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದೆ. ಈ ಹಿನ್ನೆಲೆ ಇಂತಹ ಪ್ರಕರಣಗಳು ಪತ್ತೆಯಾಗುತ್ತಿದ್ದು, ಅಧಿಕಾರಿಗಳು ನಿಗಾವನ್ನು ಮತ್ತಷ್ಟು ಕಠಿಣಗೊಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now