ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817
ಚಿತ್ರದುರ್ಗ,(ಜೂ.01) : ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ನಡೆಸಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮೇಲೆ ಕಾನೂನು ಕ್ರಮ ಜರುಗಿಸಿ ಬಂಧಿಸಲು ಆಗ್ರಹಿಸಿ ಸಲ್ಲಿಸಿದ ಒತ್ತಾಯಿಸಿ ಸಂಯುಕ್ತ ಹೋರಾಟ ಸಮಿತಿ ಕರ್ನಾಟಕ ಚಿತ್ರದುರ್ಗ ಜಿಲ್ಲಾ ಸಮಿತಿ ಇಂದು ಚಿತ್ರದುರ್ಗದಲ್ಲಿ ಪ್ರತಿಭಟನೆಯನ್ನು ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರು ಮನವಿ ಮಾಡಿತು.
ಒಲಂಪಿಕ್ ಪದವಿ ವಿಜೇತರು, ವಿಶ್ವ ಚಾಂಪಿಯನ್ ಕುಸ್ತಿಪಟುಗಳು ಸೇರಿದಂತೆ ದೇಶದ ಕ್ರೀಡಾಪಟುಗಳು 2023 ಏಪ್ರಿಲ್ 2024ರಿಂದ ನವದೆಹಲಿಯ ಜಂತರ್ ಮಂತರ್‍ನಲ್ಲಿ ಪ್ರತಿಭಟನೆ ನಡೆಸುತ್ತಿರುವುದು ರಾಷ್ಟ್ರಪತಿಯವರಿಗೆ ತಿಳಿದ ವಿಷಯವಾಗಿದೆ. ಮಹಿಳಾ ಕುಸ್ತಿಪಟುಗಳ ಕೆಲವರ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಸುಪ್ರೀಂ ಕೋರ್ಟಿನ ಮಧ್ಯ ಪ್ರವೇಶ ನಂತರವಷ್ಟೆ ಎಫ್‍ಐಆರ್ ದಾಖಲಾಗಿರುವುದು ಕೂಡ ತಮಗೆ ತಿಳಿದಿದೆ. ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳಾ ಕುಸ್ತಿಪಟುಗಳು ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಕೇಳುತ್ತಿದ್ದಾರೆ ಮತ್ತು ಕುಸ್ತಿಪಟುಗಳ ಆರೋಪದ ಹಿನ್ನಲೆಯಲ್ಲಿ ರಚಿಸಲಾದ ವಿಚಾರಣಾ ಸಮಿತಿಯ ವರದಿಯನ್ನು ಸಾರ್ವಜನಿಕರ ಗಮನಕ್ಕೆ ತರಬೇಕು ಎಂದು ಆಗ್ರಹಿಸಿ ಹೋರಾಟ ಮಾಡುತ್ತಿದ್ದಾರೆ.
ಆರೋಪಿಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾದ ಕೇಂದ್ರ ಸರ್ಕಾರ ತನ್ನ ಪೊಲೀಸ್ ಪಡೆಗಳನ್ನು ಬಳಸಿ ನ್ಯಾಯಕ್ಕಾಗಿ ಪ್ರತಿಭಟಿಸಿರುವ ಕ್ರೀಡಾ ಪಟುಗಳ ಮೇಲೆಯೇ ಧಮನಕಾರಿ ಕ್ರಮಗಳನ್ನು ಅನುಸರಿಸಿದೆ.
ಭೇಟಿ ಬಚಾವೋ ಬೇಟಿ ಪಡಾವೋ” ಎಂದು ಪ್ರಚಾರ ಮಾಡುವ ನರೇಂದ್ರ ಮೋದಿ ಯವರ ಒಕ್ಕೂಟ ಸರ್ಕಾರ ಹೀನ ಅಪರಾಧಿ ಆರೋಪಿ ಬಿಜೆಪಿ ಸಂಸದನನ್ನು ರಕ್ಷಿಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ದೂರಿದ್ದಾರೆ.
ದೇಶದ ನಾಗರೀಕರು ದೌರ್ಜನ್ಯವನ್ನು ಖಂಡಿಸಿ ಪ್ರತಿಭಟಿಸಿ ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಬಂಧಿಸಲು ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಿ ತಮ್ಮ ಮಧ್ಯ ಪ್ರವೇಶವನ್ನು ಕೋರಿ ಮನವಿಯನ್ನು ಮಾಡಲಾಗುತ್ತಿದೆ ಎಂದಿದ್ದಾರೆ.
ಪ್ರತಿಭಟನೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ನುಲೇನೂರು ಶಂಕರಪ್ಪ, ತಾಲ್ಲೂಕು ಅಧ್ಯಕ್ಷ ಧನಂಜಯ, ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಸುರೇಶ್ ಬಾಬು, ಸತ್ಯಪ್ಪ ಮಲ್ಲಾಪುರ, ರವಿಕುಮಾರ್, ಷಪೀವುಲ್ಲಾ, ಮಲ್ಲಿಕಾರ್ಜನಪ್ಪ, ಕಾಂತರಾಜ್, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಎಸ್ತರ ಸುನಂದ, ವೀರಣ್ಣ, ಓಂಕಾರಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.
ಲೈಂಗಿಕ ಕಿರುಕುಳದ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ, ಕುಸ್ತಿಪಟುಗಳ ಪ್ರತಿಭಟನೆಯನ್ನು ಬೆಂಬಲಿಸಿ ಹಾಗೂ ಲೈಂಗಿಕ ಕಿರುಕುಳದ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧಿಸಬೇಕು ಮತ್ತು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಇಂದು ನಗರದಲ್ಲಿ ಪ್ರತಿಭಟನೆಯನ್ನು ನಡೆಸಿತು.
ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೂ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ ರೈತ ಮುಖಂಡರು ಪದಾಧಿಕಾರಿಗಳು, ಈ ಪ್ರತಿಭಟನಾ ಕುಸ್ತಿಪಟುಗಳು ತಮ್ಮ ಮೇಲಾಗಿರುವ ಲೈಂಗಿಕ ಕಿರುಕುಳ ಹಾಗೂ ಹಿಂಸೆ ಸಂಬಂಧ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಎಂದು ಮಾತ್ರ ಕೇಳುತ್ತಿದ್ದಾರೆ ಹಾಗೂ ಕುಸ್ತಿ ಪಟುಗಳ ಆರೋಪದ ಹಿನ್ನೆಲೆಯಲ್ಲಿ ರಚಿಸಲಾದ ಸಮಿತಿಯ ವರದಿಯನ್ನು ಸಾರ್ವಜನಿಕರ ಅವಗಾಹನೆಗೆ ತರಬೇಕು. ಎಂದು ಆಗ್ರಹಿಸಿದರು.
ಭಾರತ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಇನ್ನಿತರ ಸಿಬ್ಬಂದಿಗಳು, ಅಪ್ರಾಪ್ತ ಹೆಣ್ಣು ಮಕ್ಕಳು ಸೇರಿದಂತೆ ಪ್ರಖ್ಯಾತ ಮಹಿಳಾ ಕುಸ್ತಿ ಪಟುಗಳನ್ನು ಲೈಂಗಿಕ ಕಿರುಕಳು ಹಾಗೂ ಹಿಂಸೆಗೆ ಒಳಪಡಿಸಿರುವುದು ಅತ್ಯಂತ ಅಘಾತಕಾರಿ ಮತ್ತು ದೇಶವೇ ತಲೆತಗ್ಗಿಸುವಂತಹ ಘಟನೆಯಾಗಿದೆ. ದೂರಿನ ಆಧಾರ ಮೇಲೆ ಕಾನೂನು ಕ್ರಮ ಜರುಗಿಸಿ ನೊಂದ ಬಿಜೆಪಿ ಸಂಸದನನ್ನು ರಕ್ಷಿಸುತ್ತಿರುವುದು ಮಹಿಳಾ ಕ್ರೀಡಾಪಟುಗಳಿಗೆ ರಕ್ಷಣೆ ಒದಗಿಸಬೇಕಾಗಿದ್ದ ಬಿಜೆಪಿ ನೇತೃತ್ವದ ಸರ್ಕಾರ ತನ್ನ ಪೊಲೀಸ್ ಪಡೆಗಳನ್ನು ಬಳಸಿ, ನ್ಯಾಯಕ್ಕಾಗಿ ಪ್ರತಿಭಟಿಸುತ್ತಿರುವ ಕ್ರೀಡಾಪಟುಗಳ ಮೇಲೆ ದಮನಕಾರಿ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ದೂರಿದರು.
ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದು ನಮ್ಮ ದೇಶಕ್ಕೆ ಕೀರ್ತಿ ತಂದವರ ಮೇಲೆ ಇಷ್ಟು ಕಿರುಕುಳ ಆದರೆ ಇನ್ನು ಸಾಮಾನ್ಯ ಮಹಿಳೆಯರ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆ ಕೇಳುವುದು ಎಂಬ ಪ್ರಶ್ನೆಯನ್ನು ನಾವೆಲ್ಲರೂ ಹಾಕಿಕೊಳ್ಳಬೇಕಾಗುತ್ತದೆ. ದೇಶದ ಕೀರ್ತಿ ಪತಾಕೆಯನ್ನು ಹಾರಿಸಿ ಹಮ್ಮೆಯ ಪದಕಗಳನ್ನು ದೇಶಕ್ಕಾಗಿ ಗೆದ್ದವರು ಲೈಂಗಿಕ ಕಿರುಕುಳಕ್ಕೆ ಒಳಗಾಗಿರುವುದು ಅತ್ಯಂತ ನಾಟೀಕೆಗೇಡಿನ ಸಂಗತಿಯಾಗಿದೆ. ನ್ಯಾಯಕ್ಕಾಗಿ ಆಗ್ರಹಿಸುತ್ತಿರುವ ನೊಂದ ಕ್ರೀಡಾಪಟುಗಳು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಬೇಜಾವಾಬ್ದರಿ ಹಾಗೂ ಕ್ರಿಮಿನಲ್ ದೌರ್ಜನ್ಯದಿಂದ ಮತ್ತಷ್ಟು ನೊಂದು ಕಣ್ಣೀರು ಹಾಕುತ್ತಿದ್ದಾರೆ. ಪ್ರಪಂಚದಲ್ಲಿ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ ಎಂದು ಕರೆದುಕೊಳ್ಳುವ ನಮ್ಮ ದೇಶಕ್ಕೆ ಇದು ಶೋಭೆ ತರುವುದಿಲ್ಲ ಎಂದಿದ್ದಾರೆ.
ದೇಶಕ್ಕೆ ಕೀರ್ತಿ ತರುವ ಸಾಮರ್ಥ್ಯದ ಕ್ರೀಡಾಪಟುಗಳ ಆತ್ಮ ಧೈರ್ಯ ಕುಂದಿಸುವ ಕೆಲಸವನ್ನು ಈ ಕೂಡಲೇ ಬಿಜೆಪಿ ಸರ್ಕಾರ ನಿಲ್ಲಿಸಬೇಕು. ಈ ಕೂಡಲೇ ಪೋಸ್ಕೋ ಸೇರಿದಂತೆ ಮಹಿಳಾ ಕ್ರೀಡಾಪಟುಗಳ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಿಂಸೆ ನಡೆಸಿರುವ ಆರೋಪಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್‍ರನ್ನು ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಬಂಧಿಸಬೇಕು. ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಲಾಯಿತು.
ಈ ಪ್ರತಿಭಟನೆಯಲ್ಲಿ ರಾಜ್ಯ ಕಾರ್ಯಧ್ಯಕ್ಷರಾದ ಈಚಘಟ್ಟದ ಸಿದ್ದವೀರಪ್ಪ, ಸದಾಶಿವಪ್ಪ, ಚೇತನ್, ಪರಮೇಶ್ವರಪ್ಪ, ಮಹದೇವಪ್ಪ, ಮಾರುತಿ, ಕಲ್ಲೇಶ್ವರಪ್ಪ, ಸಿದ್ದೇಶ್, ನಾಗರಾಜಪ್ಪ, ಮಲ್ಲಿಕಾರ್ಜನ್, ಶ್ರೀನಿವಾಸ್, ಸೇರಿದಂತೆ ಇತರರು ಭಾಗವಹಿಸಿದ್ದರು.