Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಎರಡು ಕ್ಷೇತ್ರದಲ್ಲಿ ನಿಲ್ಲುವಂತೆ ಮಾಡಿ, ಸೋಮಣ್ಣರನ್ನು ಬಲಿಪಶು ಮಾಡಿದೆ : ಸೋಮಣ್ಣ ಪರ ನಿಂತ ಸಚಿವ ಎಂಬಿ ಪಾಟೀಲ್

---Advertisement---

ವಿಜಯಪುರ: ವಿ ಸೋಮಣ್ಣ ಸದ್ಯ ಬಿಜೆಪಿ ಪಕ್ಷದಲ್ಲಿ ಮುನಿಸಿಕೊಂಡಿದ್ದಾರೆ. ಇನ್ನು ಸ್ವಲ್ಪದರಲ್ಲಿಯೇ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಈ ಬೆನ್ನಲ್ಲೇ ಸಚಿವ ಎಂ ಬಿ ಪಾಟೀಲ್, ವಿ ಸೋಮಣ್ಣ ಪರ ಮಾತನಾಡಿದ್ದಾರೆ. ಸೋಮಣ್ಣ ಅವರನ್ನು ಎರಡೆರಡು ಕ್ಷೇತ್ರಗಳಲ್ಲಿ ನಿಲ್ಲಿಸಿ ಬಲಿ ಪಶು ಮಾಡಿದ್ದಾರೆ ಎಂದಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಹಿರಿಯ ನಾಯಕ ವಿ ಸೋಮಣ್ಣ ಅಸಮಾಧಾನಗೊಂಡಿರುವುದು ಸ್ವಾಭಾವಿಕ. ಎರಡು ಕಡೆಗಳಲ್ಲೂ ಅವರು ಹೀನಾಯವಾಗಿ ಸೋಲು ಕಂಡರು. ಗೋವಿಂದರಾಜ ನಗರದಲ್ಲಿ ಅವರು ಸ್ಪರ್ಧಿಸಿದ್ದರೆ ಗೆಲ್ಲುತ್ತಿರಲಿಲ್ಲ. ಆದರೆ ಸೋಲು ಅಷ್ಟು ಹೀನಾಯವಾಗುತ್ತಿರಲಿಲ್ಲ. ಸೋಮಣ್ಣ ಅವರು ಕಾಂಗ್ರೆಸ್ ಸೇರುವುದಕ್ಕೆ ಬಯಸಿದರೆ, ಸೇರಿಸಿಕೊಳ್ಳುವುದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದಿದ್ದಾರೆ.

 

ನನ್ನೊಂದಿಗೆ, ಕೆಪಿಸಿಸಿ ಅಧ್ಯಕ್ಷರೊಂದಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಹಲವರು ಸಂಪರ್ಕದಲ್ಲಿದ್ದಾರೆ. ಲೋಕಸಭಾ ಚುನಾವಣೆಯ ಮೊದಲು ಅಥವಾ ಬಳಿಕ ರಾಜ್ಯ ರಾಜಕಾರಣದಲ್ಲಿ ಜೋರು ಬದಲಾವಣೆ ನಡೆಯಲಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿದ ಬಳಿಕ ನನ್ನ ಅಧಿಕೃತ ನಿಲುವು ಸ್ಪಷ್ಟಪಡಿಸುತ್ತೇನೆ.ಇನ್ನುಳಿದಂತೆ ಜಾತಿಗಣತಿ ವರದಿ ಮಂಡನೆಯಿಂದ ಜಾತಿ‌ಗಳ ನಡುವೆ ಸಂಘರ್ಷ ವಿಚಾರ ‘ಅದು ಏನೇ ಇದ್ದರೂ ಪಕ್ಷ ಹಾಗೂ ಸರ್ಕಾರದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ ಎಂದು ಜಾತಿಗಣತಿ ವಿಚಾರದ ಬಗ್ಗೆ ಮಾತನಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment