ಬೆಂಗಳೂರು: ರಾಜ್ಯದ ಹಿರಿಯ ಐಎಎಸ್ ಆಫೀಸರ್ ಆಗಿರುವ ಸಿ ಶಿಖಾ ಅವರು ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದಾರೆ. ಶಿಖಾ ಅವರು ಬಿಎಂಟಿಸಿ ಎಂಡಿಯಾಗಿ, ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ ಹಲವು ವಿಭಾಗಳಲ್ಲಿ ತಮ್ಮ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಅವರ ಸೇವೆ ಗುರುತಿಸಿ ಹಲವು ಪ್ರಶಸ್ತಿಗಳು ಸಿಕ್ಕಿವೆ. ಸಿ ಶಿಖಾ ಅವರು 2004ನೇ ಬ್ಯಾಚ್ ನ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿ. ಪ್ರಸ್ತುತ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಕೇಂದ್ರ ಸೇವೆಗೆ ಶಿಖಾ ಅವರನ್ನು ನಿಯೋಜನೆ ಮಾಡಲಾಗಿದೆ.
ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯದ ಜಂಟಿ ಕಾರ್ಯದರ್ಶಿಯಾಗಿ ನಿಯೋಜನೆಗೊಂಡಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಶಿಖಾ ಅವರು ಕೇಂದ್ರ ಸೇವೆಗೆ ನಿಯೋಜನೆಗೊಳ್ಳಲಿದ್ದಾರೆ.
ಶಿಖಾ ಅವರು ಮೈಸೂರು ಜಿಲ್ಲಾಧಿಕಾರಿಯಾಗಿ, ಸೆಸ್ಕಾಂ ಮತ್ತು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ, ಪಿಯು ಬೋರ್ಡ್ ನಿರ್ದೇಶಕರಾಗಿ, ಬಿಎಂಟಿಸಿ ಎಂಡಿಯಾಗಿ, ವಾಣಿಜ್ಯ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೇ ಸಿ.ಶಿಖಾ ಅವರಿಗೆ ಭಾರತ ಚುನಾವಣಾ ಆಯೋಗ ಅತ್ಯುತ್ತಮ ಚುನಾವಣಾ ಅಭ್ಯಾಸಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಸಿ.ಶಿಖಾ ಅವರಿಗೆ ನೀಡಿದೆ. 2023ರ ಸಾಲಿನಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಆಯುಕ್ತರಾಗಿ ಇಲಾಖೆಯ ಮೂಲಕ ಮತದಾರರಲ್ಲಿ ಉಚಿತ ಉಡುಗೊರೆಗಳ ಕುರಿತು ಹಮ್ಮಿಕೊಂಡಿದ್ದ ಜನಜಾಗೃತಿ, ವಾಣಿಜ್ಯ ಕ್ಷೇತ್ರದಲ್ಲಿ ಚುನಾವಣಾ ನೀತಿ ಸಂಹಿತಿ ಪಾಲನೆ ಸೇರಿದಂತೆ ಕಟ್ಟುನಿಟ್ಟಿನ ಚುನಾವಣೆ ನಡೆಸಲು ಪ್ರಮುಖ ಪಾತ್ರವಹಿಸಿದ್ದಕ್ಕಾಗಿ ಆಯೋಗ ಅವರಿಗೆ ಪ್ರಶಸ್ತಿಯನ್ನು ನೀಡಿತ್ತು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…