ಚಿಕ್ಕಮಗಳೂರು : ಎಂಇಎಸ್ ಪುಂಡರ ಪುಂಡಾಟ ಜಾಸ್ತಿಯಾಗ್ತಾ ಇದ್ರೆ, ಇಲ್ಲಿ ರಾಜಕೀಯ ನಾಯಕರು ರಾಜಕಾರಣಿಗಳನ್ನ ದೂಷಿಸಿಕೊಂಡು ಕೂತಿದ್ದಾರೆ. ಕನ್ನಡ ಪರ ಸಂಘಟನೆಗಳು ಹೋರಾಟ ಮಾಡಿ, ಎಂಇಎಸ್ ಪುಂಡರಿಗೆ ಸರಿಯಾದ ಶಿಕ್ಷೆಯಾಗಲೇಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದ್ರೆ ಬಿಜೆಪಿಯವರು ಇದಕ್ಕೆಲ್ಲಾ ಕಾರಣ ಕಾಂಗ್ರೆಸ್ ಅಂತ ಕೂತಿದೆ.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮಾತನಾಡಿದ್ದು, ಈ ಎಂಇಎಸ್ ಪುಂಡಾಟಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಾರಣ ಎಂದಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಹತಾಷ ಭಾವದಲ್ಲಿದ್ದಾರೆ. ಹೀಗಾಗಿ ದೇಶದಲ್ಲಿ ಸಂಘರ್ಷ ನಡೆಸಿ, ರಾಜಕೀಯ ದುರ್ಲಾಭ ಪಡೆಯುವ ಯೋಚನೆಯಲ್ಲಿದ್ದಾರೆ ಎಂದಿದ್ದಾರೆ.
ಈ ಪುಂಡಾಟದ ಹಿಂದೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇದ್ದಾರೆ. ಅಸಲಿಗೆ ಈ ಪುಂಡಾಟದ ಡೈರೆಕ್ಟರ್ ಮತ್ತು ನಿರ್ಮಾಪಕ ಅವರೆ. ಶಿವಾಜಿ ಪ್ರತಿಮೆಗೆ ಅವಮಾನ ಮಾಡಿದ್ದು ಡಿಕೆಶಿ ಮತ್ತು ಜಮೀರ್ ಅಹ್ಮದ್ ಅವ್ರ ಕಟ್ಟಾ ಬೆಂಬಲಿಗರು. ಮತ್ತು ಕಾಂಗ್ರೆಸ್ ಕಾರ್ಯಕರ್ತರು. ಈ ರೀತಿ ಮಾಡಿದ್ದು, ಜಾತಿ ಸಂಘರ್ಷ ಮತ್ತು ಭಾಷಾ ಸಂಘರ್ಷ ಹುಟ್ಟು ಹಾಕುವ ಉದ್ದೇಶ ಇಟ್ಟುಕೊಂಡಿದ್ದಾರೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…