ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳೆಗೆರೆ, ಚಳ್ಳಕೆರೆ,
ಮೊ : 84314 13188
ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 17 : ತಾಲೂಕಿನ ವೀರದಿಮ್ಮನಹಳ್ಳಿ ಗ್ರಾಮ ಕೃಷಿ ಪತ್ತಿನ ಪ್ರಾಥಮಿಕ ಸಹಕಾರ ಸಂಘಕ್ಕೆ ಸೋಮವಾರ ಹಮ್ಮಿಕೊಂಡಿದ್ದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಸಿ.ವೀರಭದ್ರ ಬಾಬು, ಉಪಾಧ್ಯಕ್ಷೆಯಾಗಿ ಜಯಮ್ಮ ಅವಿರೋಧ ಆಯ್ಕೆ ಆಗಿದ್ದಾರೆಂದು ಚುನಾವಣಾಧಿಕಾರಿ ಸೈಯದ್ ಪರ್ವಿದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಘದ 13 ನಿರ್ದೇಶಕರ ಸಂಖ್ಯಾ ಬಲದಲ್ಲಿ ಎಂಟು ಜನ ನಿರ್ದೇಶಕರು ಒಬ್ಬ ನಾಮ ನಿರ್ದೇಶನ ಸದಸ್ಯ ಸೇರಿ ಅವಿರೋಧ ಆಯ್ಕೆ ಮಾಡಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ವೀರಭದ್ರ ಬಾಬು ಇವರಿಗೆ ಸದಸ್ಯಹಾಗೂ ಮುಖಂಡರುಗಳು ಸನ್ಮಾನಿಸಿ ಅಭಿನಂದಿಸಲಾಗಿದೆ.
ಸದಸ್ಯರು ಉಪಾಧ್ಯಕ್ಷ ಸೇರಿದಂತೆ ಮುಖಂಡರು ಇದ್ದರು..
















