ಸಂಪುಟ ವಿಸ್ತರಣೆ ಚರ್ಚೆ : ಸಚಿವ ಸ್ಥಾನಕ್ಕೆ ವಿನಯ್ ಕುಲಕರ್ಣಿ ಬೇಡಿಕೆ

suddionenews
1 Min Read

 

 

ಧಾರವಾಡ: ರಾಜ್ಯದಲ್ಲಿ ಸದ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆಯೇ ಸಾಕಷ್ಟು ಚರ್ಚೆಯಾಗುತ್ತಿದೆ. ಉಪಚುನಾವಣೆ ಬಳಿಕ ರಾಜ್ಯ ಸರ್ಕಾರ ಕಾಂಗ್ರೆಸ್ ಪಕ್ಷದಲ್ಲಿ ಒಂದಷ್ಟು ಬದಲಾವಣೆಯಾಗಲಿದೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಅದರಲ್ಲೂ ಸಂಪುಟ ವಿಸ್ತರಣೆಯ ಬಗ್ಗೆ ಚರ್ಚೆಯಾಗುತ್ತಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ದೆಹಲಿ ಪ್ರವಾಸ ಅದಕ್ಕೆ ಮತ್ತಷ್ಟು ಪುಷ್ಠಿ ನೀಡಿದ್ದು, ಈಗ ಮತ್ತೆ ಸಂಪುಟ ವಿಸ್ತರಣೆ ಮುನ್ನಲೆಗೆ ಬಂದಿದೆ.

ಸಂಪುಟ ವಿಸ್ತರಣೆಯಾಗಲಿದೆ ಎಂಬ ಸುದ್ದಿಯಾಗುತ್ತಲೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತ ಹೋಗುತ್ತಿದೆ. ಸಂಪುಟದಿಂದ ಹೊರಗೆ ಬಂದವರು, ಶಾಸಕರು ಕೂಡ ಆಕಾಂಕ್ಷಿಗಳಾಗಿದ್ದಾರೆ. ಇದರ ಸಾಲಿನಲ್ಲಿ ಶಾಸಕ ವಿನಯ್ ಕುಲಕರ್ಣಿ ಕೂಡ ಇದ್ದಾರೆ. ‘ಇನ್ನು ಹದಿನೈದು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ’ ಎಂದು ಶಾಸಕ ವಿನಯ್ ಕುಲಕರ್ಣಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ವಿನಯ್ ಕುಲಕರ್ಣಿ, ಸಚುವ ಸಂಪುಟ ವಿಸ್ತರಣೆ ಶೀಘ್ರವೇ ನಡೆಯಲಿದ್ದು, ಈ ಕುರಿತು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಸಚಿವ ಸ್ಥಾನಕ್ಕೆ ಸಿಪಿ ಯೋಗೀಶ್ವರ್ ಹಾಗೂ ಲಕ್ಷ್ಮಣ ಸವದಿ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಮಾಡಲಿದೆ. ಆದರೆ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದಿದ್ದಾರೆ.

ಇದೆ ವೇಳೆ ಪಂಚಮಸಾಲಿ ಹೋರಾಟದ ಬಗ್ಗೆ ಮಾತನಾಡಿ, ಹೋರಾಟದಲ್ಲಿ ಯಾವುದೇ ಬದಲಾವಣೆ ಇಲ್ಲ. ಬಿಜೆಪಿ ಸರ್ಕಾರ ಇದ್ದಾಗ ಕೂಡ ಸ್ವಾಮೀಜಿ ಹೋರಾಟ ಮಾಡಿದ್ದಾರೆ. ನಮ್ಮ ಸರ್ಕಾರ ಇದ್ದಾಗಲೂ ಬೇಡ ಎನ್ನಲು ಆಗಲ್ಲ. ನಾನು ಹೋರಾಟಕ್ಕೆ ಹೋಗುವೆ. ನಾನು ಹುಟ್ಟು ಹೋರಾಟಗಾರ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *