Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಸಂಪುಟ ವಿಸ್ತರಣೆ ಕಸರತ್ತು : ಇಂದು ದೆಹಲಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಿದ್ದರಾಮಯ್ಯ ಪ್ರಯಾಣ!

---Advertisement---

ಬೆಂಗಳೂರು.ಜುಲೈ.27: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಸಚಿವ ಸಂಪುಟ ವಿಸ್ತರಣೆ ಕಸರತ್ತು ಈಗ ಅಂತಿಮ ಘಟ್ಟಕ್ಕೆ ತಲುಪಿದೆ. ವರಿಷ್ಠರ ಹಸಿರು ನಿಶಾನೆ ಪಡೆಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಗೆ ಪಯಣ ಬೆಳಸಲಿದ್ದಾರೆ.

ಮಂಗಳವಾರ ಎಐಸಿಸಿ ಮುಖಂಡರೊಂದಿಗೆ ರಾಜ್ಯ ನಾಯಕರ ನಿರ್ಣಾಯಕ ಸಭೆ ನಿಗದಿಯಾಗಿದ್ದು, ನೂತನ ಸಚಿವರ ಪಟ್ಟಿಗೆ ಹೈಕಮಾಂಡ್‌ನ ಅಂತಿಮ ಮುದ್ರೆ ಬೀಳುವ ಸಾಧ್ಯತೆಯಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಬುಧವಾರ ಅಥವಾ ಗುರುವಾರ ಹೊಸ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಗಳಿವೆ.

ಕಳೆದ ವಾರವೇ ರಾಹುಲ್ ಗಾಂಧಿ ಅವರು ದೆಹಲಿಗೆ ಆಗಮಿಸಿದ ತಕ್ಷಣವೇ ರಾಜ್ಯ ನಾಯಕರಿಗೆ ಬುಲಾವ್ ನೀಡಲಾಗಿತ್ತು. ಆದರೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆಗಳು ತೀವ್ರಗೊಂಡಿದ್ದರಿಂದ ವರಿಷ್ಠರೊಂದಿಗಿನ ಸಮಾಲೋಚನೆ ಮುಂದೂಡಲ್ಪಟ್ಟಿತ್ತು. ಹೀಗಾಗಿ ಸೋಮವಾರ ದೆಹಲಿಯಲ್ಲಿ ರಾಜ್ಯದ ಸಂಸದರೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚಿಸಲಿರುವ ಮುಖ್ಯಮಂತ್ರಿಗಳು, ಮಂಗಳವಾರ ಹೈಕಮಾಂಡ್ ಭೇಟಿಯಾಗಿ ಸಂಪುಟ ವಿಸ್ತರಣೆಯ ಪಟ್ಟಿಗೆ ಅಂತಿಮ ಒಪ್ಪಿಗೆ ಪಡೆಯಲಿದ್ದಾರೆ.

Join WhatsApp

Join Now

Join Telegram

Join Now