Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಜೆಟ್ ಬಳಿಕ ಸಂಪುಟ ಪುನರ್ ರಚನೆ: 10-12 ಮಂತ್ರಿಗಳಿಗೆ ಗೇಟ್ ಪಾಸ್..!

---Advertisement---

ಬೆಂಗಳೂರು: ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಅವರು ಅಂದುಕೊಂಡ ದಾಖಲೆಯನ್ನ ಬರೆದಿದ್ದಾರೆ. ದೇವರಾಜ್ ಅರಸು ಅವರ ದಾಖಲೆಯನ್ನ ಮುರೊದಿದ್ದಾರೆ. ಅವರಿಗಿಂತ ಹೆಚ್ವಿನ ಸಮಯ ಮುಖ್ಯಮಂತ್ರಿಯಾಗಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಬಜೆಟ್ ಆದ್ಮೇಲೆ ಸಚಿವ ಸಂಪುಟ ಪುನರ್ ರಚನೆ ಮಾಡಲು ಹೊರಟಿದ್ದಾರೆ. ಇದರಿಂದ ಸಿದ್ದರಾಮಯ್ಯ ಅವರ ಸಿಎಂ ಸ್ಥಾನ ಇನ್ನಷ್ಟು ಗಟ್ಟಿಯಾಗುವ ಸಾಧ್ಯತೆ ಇದೆ.

ಪ್ರಸ್ತುತ ಸರ್ಕಾರದಲ್ಲೂ ಅಸಮಾಧಾನಿತ ಶಾಸಕರಿದ್ದಾರೆ. ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಬೇಸರ ಅವರಲ್ಲಿದೆ. ಹೀಗಾಗಿ ಬಜೆಟ್ ಮುಗಿದ ಮೇಲೆ ಸಚಿವ ಸಂಪುಟ ಪುನರ್ ರಚನೆ ಮಾಡುವ ಎಲ್ಲಾ ತಯಾರಿ ನಡೆದಿದೆ ಎನ್ನಲಾಗಿದೆ. ಇದಕ್ಕೆ ಪೂರ್ವಭಾವಿಯಾಗಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ಈಗಾಗಲೇ ವೇಣುಗೋಪಾಲ್ ಅವರನ್ನು ಭೇಟಿ ಮಾಡಿರುವ ಸಿದ್ದರಾಮಯ್ಯ ಅವರು ಈ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಬಾರಿ ಸಚುವ ಸಂಪುಟ ಪುನರ್ ರಚನೆ ಆದ್ರೆ, 8 ರಿಂದ 12 ಸಚಿವರನ್ನು ಸಂಪುಟದಿಂದ ಕೈಬಿಡುವ ಎಲ್ಲಾ ಸಾಧ್ಯತೆಯೂ ಇದೆ. ಆ ಸ್ಥಾನಗಳಿಗೆ ಹೊಸ ಶಾಸಕರನ್ನು ಕೂರಿಸುವ ಫ್ಲ್ಯಾನ್ ಮಾಡಲಾಗಿದೆ. ಅದರಲ್ಲೂ 7-8 ಬಾರಿ ಶಾಸಕರಾಗಿರುವ ಹಿರಿಯರನ್ನು ಗೌರವ ಪೂರ್ವಕವಾಗಿ ಬಿಳ್ಕೊಡಲಿದ್ದಾರೆ. ಬಿ.ಕೆ.ಹರಿಪ್ರಸಾದ್, ಆರ್.ವಿ.ದೇಶಪಾಂಡೆ, ಸಲೀಂ ಅಹಮ್ಮದ್, ನಾಗೇಂದ್ರ, ಬಸವರಾಜ್ ರಾಯರೆಡ್ಡಿ, ಅಪ್ಪಾಜಿ ನಾಡಗೌಡ, ಲಕ್ಷ್ಮಣ ಸವದಿ, ರೂಪ ಶಶಿಧರ್, ತರಿಕೆರೆ ಶ್ರೀನಿವಾಸ್, ಲೇಔಟ್ ಕೃಷ್ಣಪ್ಪ, ಟಿ.ಬಿ.ಜಯಚಂದ್ರ, ರಿಜ್ವಾನ್ ಅರ್ಷದ್, ಯುಟಿ ಖಾದರ್ ಸೇರಿದಂತೆ ಹಲವರಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now