Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಪುಟ ಪುನರ್ ರಚನೆ ಬಳಿಕ ಡಿಕೆಶಿಯನ್ನ ಸಿಎಂ ಮಾಡಬಾರದು ಅಂತೇನಿಲ್ವಲ್ಲ : ಶಾಕಿಂಗ್ ಹೇಳಿಕೆ ನೀಡಿದ ಬಾಲಕೃಷ್ಣ

---Advertisement---

ಬೆಂಗಳೂರು: ಕಾಂಗ್ರೆಸ್ ನಲ್ಲಿ ಮೊದಲೇ ಕುರ್ಚಿ ಕದನ ಜೋರಾಗಿದೆ. ಸಿಎಂ ಕುರ್ಚಿಗಾಗಿ ಪೈಪೋಟಿ ಇದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಆಗ್ಲೇಬೇಕು ಎಂಬ ಹಠದಲ್ಲಿದ್ದಾರೆ. ಆದರೆ ಬಿಹಾರ ಚುನಾವಣೆ ಮುಗಿದ ಮೇಲೆ ಸಿಎಂ ಸ್ಥಾನ ಬದಲಾವಣೆ ಕಷ್ಟ ಸಾಧ್ಯ ಎಂಬಂತೆ ಆಗಿದೆ. ಈ ಬೆನ್ನಲ್ಲೇ ಮಾಗಡಿ ಶಾಸಕ ಬಾಲಕೃಷ್ಣ ಅವರು ಶಾಕಿಂಗ್ ವಿಚಾರವೊಂದನ್ನ ತಿಳಿಸಿದ್ದಾರೆ.

ಸಂಪುಟ ಪುನರ್ ರಚನೆ ಆದ ಮೇಲೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬಾರದು ಅಂತ ಏನಿಲ್ಲವಲ್ಲ..? ಯಾವ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ. ಅದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂಬ ಮಾತನ್ನು ಹೇಳುವ ಮೂಲಕ ಮತ್ತೆ ಚರ್ಚೆ ಹುಟ್ಟು ಹಾಕಿದ್ದಾರೆ.

ಇನ್ನು ಸಿಎಂ ಸ್ಥಾನಕ್ಕಾಗಿ ಹೋರಾಟ ಮಾಡುತ್ತಿರುವ ಡಿಕೆ ಶಿವಕುಮಾರ್, ಸಿಎಂ ಸ್ಥಾನ ಸಿಗದೆ ಹೋದರೆ ಕಾಂಗ್ರೆಸ್ ಪಕ್ಷವನ್ನು ತೊರೆಯುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಬಾಲಕೃಷ್ಣ ಅವರು, ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷವನ್ನು ತೊರೆಯುವ ಮಾತೇ ಇಲ್ಲ. ಇವೆಲ್ಲಾ ಬಿಜೆಪಿಯವರು ಹುಟ್ಟುಹಾಕಿರುವ ಊಹಾಪೋಹಗಳು. ನಾನು ಶಸ್ತಿನ ಸಿಪಾಯಿ. ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ ಎಂಬ ಮಾತನ್ನು ಹೇಳಿದ್ದಾರೆ. ಡಿಕೆಶಿ ಅವರಿಗೆ ಪಕ್ಷ ಉತ್ತಮ ಸ್ಥಾನಮಾನ ನೀಡಲಿದೆ ಎಂಬ ವಿಶ್ವಾಸ ನಮಗೆ ಇದೆ. ಯಾರಾದ್ರೂ ನಮ್ಮ ಪಕ್ಷಕ್ಕೆ ಬರಲಿ ಎಂದು ಬಿಜೆಪಿಯವರು ಈ ರೀತಿಯ ಗೊಂದಲಗಳನ್ನು ಮೂಡಿಸುತ್ತಾ ಇದ್ದಾರೆ. ನಮ್ಮ ಸರ್ಕಾರವನ್ನು ಉರುಳಿಸಬೇಕು ಎಂಬುದು ಬಿಜೆಪಿಯ ಉದ್ದೇಶವಾಗಿದೆ ಎಂದು ಬಾಲಕೃಷ್ಣ ಅವರು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now