Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು : ಮುಖ್ಯಮಂತ್ರಿ ಸಿದ್ದರಾಮಯ್ಯ

---Advertisement---

 

ಚಿಕ್ಕಮಗಳೂರು, ಏಪ್ರಿಲ್ 12: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ ಅವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ ಎಂದರು.

ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ಕಾರ್ಯ ಬಾಕಿಯಿದೆ. ಐದು ರಾಜ್ಯಗಳ ಚುನಾವಣೆ, ಬಜೆಟ್ ಅಧಿವೇಶನ ಸಂಪುಟ ಪುನರ್ರಚನೆ ವಿಳಂಬಕ್ಕೆ ಕಾರಣವಿರಬಹುದುಎಂದರು.

ಪಕ್ಷವಿರೋಧಿ ಕಾರ್ಯಗಳು ನಡೆದಿದ್ದರೂ ಕಾಂಗ್ರೆಸ್ ಗೆ ಗೆಲುವು : ಕಾಂಗ್ರೆಸ್ ನಲ್ಲಿ ಪಕ್ಷ ವಿರೋಧಿಗಳ ರಾಜಿನಾಮೆ ಪರ್ವ ಆರಂಭವಾಗಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಅವರು ಇದುವರೆಗೆ ರಾಜಿನಾಮೆ ನೀಡಿಲ್ಲ. ನೀಡಬಹುದೇನೋ ಎಂದರು.

ಕಾಂಗ್ರೆಸ್ ಪಕ್ಷ ಸೋಲನ್ನು ಒಪ್ಪಿಕೊಂಡಿಲ್ಲ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವುದು ಖಂಡಿತ. ತಲೆದಂಡಕ್ಕೆ ಚುನಾವಣೆಯ ಸೋಲು ಗೆಲುವು ಕಾರಣವಲ್ಲ. ಸಲೀಂ ಅಹ್ಮದ್ ಅವರು ಪಕ್ಷದ ಮುಖಂಡರು. ಅವರು, ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕೆಲವರ ಪಕ್ಷವಿರೋಧಿ ಕಾರ್ಯಗಳ ಬಗ್ಗೆ ಹೇಳಿಕೆ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆಯೇ ಹೊರತು, ಉಪಚುನಾವಣೆಯಲ್ಲಿ ಕಾಂಗ್ರೆಸ್ ಪರಾಜಿತವಾಗಲಿದೆ ಎಂದು ಅವರು ಹೇಳಿರುವುದಿಲ್ಲ. ಪಕ್ಷವಿರೋಧಿ ಚಟುವಟಿಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದರು.

ಅರಣ್ಯ ಹಕ್ಕುಪತ್ರಕ್ಕೆ ಸಭೆ :

ಮಲೆನಾಡಿನಲ್ಲಿ ರೆಸಾರ್ಟ್ ಗಳಿಗೆ ಬೇಕಾಬಿಟ್ಟಿಯಾಗಿ ಅನುಮತಿ ನೀಡುತ್ತಿರುವ ಸರ್ಕಾರ, ಅರಣ್ಯವಾಸಿಗಳಿಗೆ ಹಕ್ಕು ಪತ್ರ ನೀಡುತ್ತಿಲ್ಲ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅರಣ್ಯ ಇಲಾಖೆಯಿಂದ ಹಕ್ಕು ಪತ್ರ ನೀಡುವುದೂ ಸೇರಿದಂತೆ ಹಲವು ವಿಷಯದ ಬಗ್ಗೆ ಸಧ್ಯದಲ್ಲಿಯೇ ಸಭೆ ನಡೆಸಲಾಗುವುದು ಎಂದರು.

ಪ್ರವಾಸಿಗರಿಗೆ ಕರ್ನಾಟಕ ಸುರಕ್ಷಿತವಾಗಿದೆ :

ಪ್ರವಾಸಿಗರಿಗೆ ಕರ್ನಾಟಕ ಸುರಕ್ಷಿತ ತಾಣವಲ್ಲ ಎಂದು ಕೇರಳ ರಾಜ್ಯದಿಂದ ಟೀಕೆಗಳು ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕೇರಳ ರಾಜ್ಯದ ಬಾಲಕಿ ಚಿಕ್ಕಮಗಳೂರಿಗೆ ಬಂದು ಮೃತಪಟ್ಟಿರುವ ವಿಷಯ ತನಿಖೆಯಾಗಲಿದೆ. ಆದರೆ ಕರ್ನಾಟಕ ರಾಜ್ಯ ಪ್ರವಾಸಿಗರಿಗೆ ಸುರಕ್ಷಿತವಲ್ಲ ಎಂಬುದು ಸತ್ಯಕ್ಕೆ ದೂರವಾದ ಮಾತು ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...