ಬೆಂಗಳೂರು: ಕಳೆದ ಡಿಸೆಂಬರ್ ನಲ್ಲಿ 384 ಪ್ರೊಬೆಷನರಿ ಹುದ್ದೆಗಳ ನೇಮಕಾತಿಗಾಗಿ ಪರೀಕ್ಚೆ ನಡೆದಿತ್ತು. ಆದರೆ ಈ ಪರೀಕ್ಷೆಯಲ್ಲಿ ಕನ್ನಡದ ಕಗ್ಗೊಲೆ ಮಾಡಿದ್ದಾರೆ ಎಂದು ಪರೀಕ್ಷಾರ್ಥಿಗಳೇ ಆರೋಪ ಮಾಡಿದ್ದರು. ಕೆಎಎಸ್ ಭಾಷಾಂತರದಲ್ಲಿ 79 ಪ್ರಶ್ನೆಗಳು ತಪ್ಪಾಗಿದ್ದವು ಎಂದು ಆರೋಪ ಕೇಳಿ ಬಂದಿದೆ. ಇದರಿಂದ ಸಾವಿರಾರು ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಈ ಕಾತಣಕ್ಕೆ ಮರು ಪರೀಕ್ಷೆಗೆ ಕರವೇ ಒತ್ತಾಯಿಸುತ್ತಿದೆ.

ಈ ಸಂಬಂಧ ಪ್ರತಿಭಟನೆಗೆ ಕರೆ ನೀಡಿದೆ. ಕೆಪಿಎಸ್ಸಿ ಆಯೋಗದ ವಿರುದ್ಧ ತಿರುಗಿ ಬಿದ್ದಿರುವ ಕರವೇ, ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದು, ನಾಳೆ ರಾಜ್ಯದ ಮೂಲೆ ಮೂಲೆಯಿಂದಾನೂ ವಿದ್ಯಾರ್ಥಿಗಳು ಬರಲಿದ್ದಾರೆ. ಕರವೇ ನಾರಾಯಣಗೌಡ ನೇತೃತ್ವದಲ್ಲಿ ನಾಳೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯಲಿದೆ.

ಕನ್ನಡದ ಕಗ್ಗೋಲೆ ಮಾಡಿ ಕೆಪಿಎಸ್ಸಿ ಪ್ರಶ್ನೆ ಪತ್ರಿಕೆಯನ್ನು ತಯಾರು ಮಾಡಿದೆ. ಕೂಡಲೇ ಮರುಪರೀಕ್ಷೆ ಮಾಡಬೇಕೆಂದು ಆಗ್ರಹಿಸಿ ನಾಳೆ, ಸಾವಿರಾರು ವಿದ್ಯಾರ್ಥಿಗಳು, ಸಾಹಿತಿಗಳು ಪ್ರತಿಭಟನೆ ನಡೆಸಲಿದ್ದಾರೆ. ಈ ಸಂಬಂಧ ಈಗಾಗಲೇ ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಹೀಗಾಗಿ ಮರುಪರೀಕ್ಷೆ ನಡೆಸಬೇಕೆಂದು ರಾಜ್ಯಪಾಲರ ಬಳಿ ಮನವಿ ಮಾಡಿಕೊಳ್ಳಲಾಗಿದೆ. ರಾಜ್ಯಪಾಲರಿಗೆ ಕರವೇ ದೂರು ನೀಡುವಾಗ ಅವರ ಜೊತೆಗೆ ಅಖಿಲ ಕರ್ನಾಟಕ ವಿದ್ಯಾರ್ಥಿ ಮತ್ತು ಸಂಶೋಧಕರ ಸಂಘ ಕೂಡ ಹಾಜರಿತ್ತು. ಎಲ್ಲರೂ ಸೇರಿ ರಾಜ್ಯಪಾಲರಿಗೆ ಮರುಪರೀಕ್ಷೆ ನಡೆಸಬೇಕೆಂದು ಮನವಿ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಭರವಸೆ ನೀಡಿದ್ದು, ಈ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದ್ದಾರೆ.

