Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಾಮಫಲಕ ಅಳವಡಿಸದ ಅಂಗಡಿ ಮುಂಗಟ್ಟುಗಳ ಪರವಾನಗಿ ರದ್ದುಪಡಿಸಿ : ಕರುನಾಡ ವಿಜಯಸೇನೆ ಮನವಿ  

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 17 : ಸರ್ಕಾರದ ಆದೇಶವಿದ್ದರೂ ಕನ್ನಡ ನಾಮಫಲಕಗಳನ್ನು ಅಳವಡಿಸದಿರುವ ಅಂಗಡಿ ಮುಂಗಟ್ಟುಗಳ ಪರವಾನಗಿಯನ್ನು ರದ್ದುಪಡಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಕರುನಾಡ ವಿಜಯಸೇನೆ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ಚುನಾವಣಾ ಶಾಖೆಯ ತಹಶೀಲ್ದಾರ್ ಬೀಬಿ ಫಾತಿಮರವರಿಗೆ ಮನವಿ ಸಲ್ಲಿಸಿದರು.

ನಗರಸಭೆ ಹಾಗೂ ಇನ್ನಿತರೆ ಇಲಾಖೆಗಳಿಂದ ಪರವಾನಗಿ ಪಡೆದು ವ್ಯಾಪಾರ ವಹಿವಾಟು ನಡೆಸುತ್ತಿರುವವರು ಶೇ.60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಬೇಕೆಂಬ ನಿಯಮವಿದ್ದರೂ ಪಾಲನೆ ಮಾಡುತ್ತಿಲ್ಲ. ಖಾಸಗಿ ಆಸ್ಪತ್ರೆ, ಶಾಲಾ-ಕಾಲೇಜು, ಸಂಘ ಸಂಸ್ಥೆಗಳು, ಎಂಟರ್ ಪ್ರೈಸಸ್ ಕಚೇರಿಗಳು ಕನ್ನಡ ನಾಮಫಲಕಗಳನ್ನು ಹಾಕಬೇಕೆಂದು ಹಲವಾರು ಬಾರಿ ಮನವಿ ಮಾಡಿದ್ದೇವೆ. ನಗರಸಭೆ ಪೌರಾಯುಕ್ತರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೆ ಎಚ್ಚೆತ್ತುಕೊಂಡು ಕನ್ನಡ ನಾಮಫಲಕಗಳ ಅಳವಡಿಕೆಗೆ ಸೂಚಿಸಬೇಕು. ಇಲ್ಲವಾದಲ್ಲಿ ನ.1 ಕನ್ನಡ ರಾಜ್ಯೋತ್ಸವದಂದು ವಿನೂತನವಾಗಿ ಪ್ರತಿಭಟಿಸಲಾಗುವುದೆಂದು ಕರುನಾಡ ವಿಜಯಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಎಚ್ಚರಿಸಿದರು.

ಶೇ.60 ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸದಿರುವ ಅಂಗಡಿ ಮಾಲೀಕರುಗಳ ಮೇಲೆ ಕೇಸು ದಾಖಲಿಸಿ ದಂಡ ವಿಧಿಸಬೇಕು. ಕನ್ನಡ ರಾಜ್ಯೋತ್ಸವ ಆಚರಣೆ ಸಂಬಂಧ ಕನ್ನಡ ಪರ ಸಂಘಟನೆಗಳನ್ನು ದೂರವಿಟ್ಟು ಜಿಲ್ಲಾಡಳಿತ ಕಳೆದ 15 ರಂದು ಸಭೆ ನಡೆಸಿ ಹೋರಾಟಗಾರರಿಗೆ ಅವಮಾನ ಮಾಡಿದೆ. ಮತ್ತೊಮ್ಮೆ ಸಭೆ ಕರೆದು ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸುವ ಕುರಿತು ಚರ್ಚಿಸುವಂತೆ ಕೆ.ಟಿ.ಶಿವಕುಮಾರ್ ಒತ್ತಾಯಿಸಿದರು.

ಕರುನಾಡ ವಿಜಯಸೇನೆ ಮಹಿಳಾಧ್ಯಕ್ಷೆ ವೀಣಗೌರಣ್ಣ, ಪ್ರಧಾನ ಕಾರ್ಯದರ್ಶಿ ಗೋಪಿನಾಥ್, ಕಾರ್ಯದರ್ಶಿ ಜಗದೀಶ್, ಯುವ ಘಟಕದ ಅಧ್ಯಕ್ಷ ನಾಗರಾಜ್‍ ಮುತ್ತು ಅಣ್ಣಪ್ಪ, ತಿಪ್ಪೇಸ್ವಾಮಿ, ವಿಜಯಬಾಬು, ಅವಿನಾಶ್, ಅಖಿಲೇಶ್, ಶಶಿ, ನಾಗೇಶ್, ನಿಸಾರ್ ಅಹಮದ್ ಇವರುಗಳು ಈ ಸಂದರ್ಭದಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now