Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕ್ಯಾನ್ಸರ್ ಅಂದರೆ ಸಾವಲ್ಲ, ಅದು ಒಂದು ರೋಗ : ಸಚಿವ ಸುಧಾಕರ್

Facebook
Twitter
Telegram
WhatsApp

ಬೆಂಗಳೂರು: ಕ್ಯಾನ್ಸರ್ ಪದದ ಅರ್ಥ ಸಾವು ಎಂದಲ್ಲ, ಇದೊಂದು ರೋಗದ ಹೆಸರು. ಕ್ಯಾನ್ಸರ್ ಬಂದಾಕ್ಷಣ ಸಾವು ಬಂದಿದೆ ಎಂಬ ಆತಂಕವನ್ನು ದೂರ ಮಾಡಲು ಜಾಗೃತಿ ಅಗತ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಬೆಂಗಳೂರಿನಲ್ಲಿ ಕ್ಯಾನ್ಸರ್ ದಿನದ ಪ್ರಯುಕ್ತ, ಕ್ಯಾನ್ಸರ್ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಶ್ವದಾದ್ಯಂತ ಕ್ಯಾನ್ಸರ್ ದಿನ ಆಚರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಲಹೆಯಂತೆ ಒಂದು ವಾರ ಕ್ಯಾನ್ಸರ್ ಸಪ್ತಾಹ ವಿನೂತನವಾಗಿ ನಡೆಯಲಿದೆ ಎಂದು ತಿಳಿಸಿದರು.

ವಿಶ್ವ ಸಂಸ್ಥೆಯ ಪ್ರಕಾರ ಶಿಕ್ಷಣದ ಕೊರತೆ, ಬಡತನ ಇರುವ ರಾಷ್ಟ್ರಗಳಲ್ಲಿ ಕ್ಯಾನ್ಸರ್ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ಕ್ಯಾನ್ಸರ್ ಶಿಬಿರ ಹಮ್ಮಿಕೊಂಡಿದೆ. ಕಿದ್ವಾಯಿ ಸಂಸ್ಥೆ , ಅನೇಕ ಸಂಘ ಸಂಸ್ಥೆಗಳು ಮತ್ತು ಆಸ್ಪತ್ರೆಗಳು ಇದಕ್ಕೆ ಕೈ ಜೋಡಿಸಿವೆ. ಎಷ್ಟು ಬೇಗ ಕ್ಯಾನ್ಸರ್ ಪತ್ತೆಯಾಗುತ್ತದೋ ಅಷ್ಟು ಬೇಗ ಗುಣಪಡಿಸಬಹುದು. ಕ್ಯಾನ್ಸರ್ ರೋಗಿಗಳನ್ನು ಪ್ರೀತಿ ಮತ್ತು ಎಚ್ಚರಿಕೆಯಿಂದ ಆರೈಕೆ ಮಾಡಿ ಎಂದು ಹೇಳಿದರು.

ಕ್ಯಾನ್ಸರ್ ಪದ ಕೇಳಿದ ಕೂಡಲೇ ಜನ ಭಯಭೀತರಾಗುತ್ತಾರೆ. ಈ ಭಯದಿಂದ ದೇಹದಲ್ಲಿ ಬದಲಾವಣೆ ಆಗುತ್ತಿದ್ದರೂ ಜನರು ಆಸ್ಪತ್ರೆಗಳಿಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುತ್ತಿಲ್ಲ. 21ನೇ ಶತಮಾನದಲ್ಲಿ ತಂತ್ರಜ್ಞಾನ, ಸಂಶೋಧನೆ ಮತ್ತು ಆವಿಷ್ಕಾರಗಳ ಫಲದಿಂದ ಔಷಧಿ ಬಂದಿದೆ. 1 ಮತ್ತು 2ನೇ ಹಂತದ ಕ್ಯಾನ್ಸರ್ ಇದ್ದರೆ ಅದರಿಂದ ಗುಣಮುಖರಾಗಬಹುದು ಎಂದು ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!