in

ಜಗಳೂರು ಬಳಿ ಭೀಕರ ರಸ್ತೆ ಅಪಘಾತ : ಏಳು ಮಂದಿ ಸಾವು

suddione whatsapp group join

ಚಿತ್ರದುರ್ಗ, (ಜ.14) : ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ.

ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಾನನಕಟ್ಟೆ ಗ್ರಾಮದ ಟೋಲ್ ಬಳಿ ಈ ದುರಂತ ಸಂಭವಿಸಿದೆ.

ಬೆಂಗಳೂರಿನಿಂದ ಹೊಸಪೇಟೆ ಕಡೆಗೆ
ವೇಗವಾಗಿ ಚಲಿಸುತ್ತಿದ್ದ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ ಕಾರಿನಲ್ಲಿದ್ದ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಇವರೆಲ್ಲರೂ ಯಾದಗಿರಿ ಜಿಲ್ಲೆಯ ಶಹಾಪುರ ನಿವಾಸಿಗಳು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ದಾವಣಗೆರೆ ಎಸ್‌ಪಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

What do you think?

-1 Points
Upvote Downvote

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಈ ರಾಶಿಯವರು ಹಣಕಾಸಿನ ಪ್ರಗತಿಯೊಂದಿಗೆ ಶುಭಾರಂಭ..!

ಲಾಕ್ಡೌನ್ ನಿಂದ ಕೊರೊನಾ ನಿಯಂತ್ರಣ ಮಾಡೋದು ಸರಿಯಲ್ಲ : ಸಚಿವ ಸುಧಾಕರ್