ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಮಂಡ್ಯ: ಕರೆಂಟ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
30 ವರ್ಷದ ಅನಿಕೇತ್, 32 ವರ್ಷದ ಪವನ್ ಶೆಟ್ಟಿ, 32 ವರ್ಷದ ಚಿರಂಜೀವಿ ಮೃತ ಪಟ್ಟ ಯುವಕರು. ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಆ ರಭಸಕ್ಕೆ ಮೂರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈಗಷ್ಟೇ ಜವಬ್ದಾರಿಗಳನ್ನು ತೆಗೆದುಕೊಳ್ಳಬೇಕಾದ ವಯಸ್ಸು, ಈಗಷ್ಟೇ ಕನಸುಗಳನ್ನು ನನಸು ಮಾಡಿಕೊಳ್ಳುವ ಸಮಯದಲ್ಲಿ ಗಂಡು ಮಕ್ಕಳು ಹೀಗೆ ಬಾರದೂರಿಗೆ ಹೊರಟು ನಿಂತರೆ ಯಾವ ತಂದೆ-ತಾಯಿಗೆ ಸಹಿಸಿಕೊಳ್ಳುವ ಧೈರ್ಯ ಇದ್ದಾತ. ಆ ನೋವಿನಲ್ಲೇ ಮೃತರ ಪೋಷಕರು ವಿಧಿಯನ್ನು ಶಪಿಸುತ್ತಿದ್ದಾರೆ.
ನಾಲ್ವರು ಸ್ನೇಹಿತರು ಸೇರಿ, ಅಕ್ಕಿ ಹೆಬ್ಬಾಳು ಗ್ರಾಮಕ್ಕೆ ಹೊರಟಿದ್ದರು. ಈ ವೇಳೆ ಕಾರು ವೇಗವಾಗಿ ಚಲಿಸುತ್ತಿತ್ತು. ಅಕ್ಕಿಹೆಬ್ಬಾಳು ಗ್ರಾಮಕ್ಕೆ ಬರುತ್ತಿದ್ದಂತೆ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಪಕ್ಕದಲ್ಲಿಯೇ ಇದ್ದ ಹಳ್ಳಕ್ಕೆ ಬಿದ್ದಿತ್ತು. ರಭಸದಲ್ಲಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಸಾಗರ್ ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಸಾಗರ್ ಎಂಬ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರವನ್ನು ಸಂತಸದಿಂದ ಕಳೆಯಬೇಕು ಎಂದುಕೊಂಡಿದ್ದ ಸ್ನೇಹಿತರು ಮಸಣದ ಹಾದಿಯನ್ನು ಹಿಡಿದಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್