Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಡ್ಯದಲ್ಲಿ ಕರೆಂಟ್ ಕಂಬಕ್ಕೆ ಕಾರು ಡಿಕ್ಕಿ : ಮೂವರು ಯುವರು ಸಾವು..!

Facebook
Twitter
Telegram
WhatsApp

ಮಂಡ್ಯ: ಕರೆಂಟ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ ಘಟನೆ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

30 ವರ್ಷದ ಅನಿಕೇತ್, 32 ವರ್ಷದ ಪವನ್ ಶೆಟ್ಟಿ, 32 ವರ್ಷದ ಚಿರಂಜೀವಿ ಮೃತ ಪಟ್ಟ ಯುವಕರು. ಕಾರು ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಆ ರಭಸಕ್ಕೆ ಮೂರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು‌ಮುಟ್ಟಿದೆ. ಈಗಷ್ಟೇ ಜವಬ್ದಾರಿಗಳನ್ನು ತೆಗೆದುಕೊಳ್ಳಬೇಕಾದ ವಯಸ್ಸು, ಈಗಷ್ಟೇ ಕನಸುಗಳನ್ನು ನನಸು ಮಾಡಿಕೊಳ್ಳುವ ಸಮಯದಲ್ಲಿ ಗಂಡು ಮಕ್ಕಳು ಹೀಗೆ ಬಾರದೂರಿಗೆ ಹೊರಟು ನಿಂತರೆ ಯಾವ ತಂದೆ-ತಾಯಿಗೆ ಸಹಿಸಿಕೊಳ್ಳುವ ಧೈರ್ಯ ಇದ್ದಾತ. ಆ ನೋವಿನಲ್ಲೇ ಮೃತರ ಪೋಷಕರು ವಿಧಿಯನ್ನು ಶಪಿಸುತ್ತಿದ್ದಾರೆ.

ನಾಲ್ವರು ಸ್ನೇಹಿತರು ಸೇರಿ, ಅಕ್ಕಿ ಹೆಬ್ಬಾಳು ಗ್ರಾಮಕ್ಕೆ ಹೊರಟಿದ್ದರು. ಈ ವೇಳೆ ಕಾರು ವೇಗವಾಗಿ ಚಲಿಸುತ್ತಿತ್ತು. ಅಕ್ಕಿಹೆಬ್ಬಾಳು ಗ್ರಾಮಕ್ಕೆ ಬರುತ್ತಿದ್ದಂತೆ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಪಕ್ಕದಲ್ಲಿಯೇ ಇದ್ದ ಹಳ್ಳಕ್ಕೆ ಬಿದ್ದಿತ್ತು. ರಭಸದಲ್ಲಿ ಬಿದ್ದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದರೆ, ಸಾಗರ್ ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಸಾಗರ್ ಎಂಬ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಾನುವಾರವನ್ನು ಸಂತಸದಿಂದ ಕಳೆಯಬೇಕು ಎಂದುಕೊಂಡಿದ್ದ ಸ್ನೇಹಿತರು ಮಸಣದ ಹಾದಿಯನ್ನು ಹಿಡಿದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

error: Content is protected !!