ದಾವಣಗೆರೆ (ಮೇ.11) : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದಾವಣಗೆರೆ ಇವರ ವತಿಯಿಂದ ಮೇ.13 ರಂದು ಬೆಳಗ್ಗೆ 10 ಗಂಟೆಗೆ “ವಾಕ್ ಇನ್ ಇಂಟವ್ರ್ಯೂವ್”ನ್ನು ಆಯೋಜಿಸಲಾಗಿದೆ.
ವಾಕ್ ಇನ್ ಇಂಟವ್ರ್ಯೂವ್‍ನಲ್ಲಿ ಖಾಸಗಿ ಕಂಪನಿಯಾದ ಪ್ಲಿಪ್ ಕಾರ್ಟ್ ಸಂಸ್ಥೆಯು ಬೆಂಗಳೂರು ಇವರು ಭಾಗವಹಿಸುತ್ತಿದ್ದು, ಪಿಯುಸಿ, ಡಿಪ್ಲೋಮೊ ಅಥವಾ ಯಾವುದೇ ಪದವಿ ವ್ಯಾಸಂಗ ಪೂರೈಸಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಮೇ.13ರ ಶುಕ್ರವಾರ ದಂದು ಬೆಳಗ್ಗೆ 10 ಗಂಟೆಗೆ ಕನಿಷ್ಠ 2 ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಜಿಲ್ಲಾಡಳಿತ ಭವನ ದಾವಣಗೆರೆ ಇಲ್ಲಿ ಭಾಗವಹಿಸಿ ವಾಕ್ ಇನ್ ಇಂಟವ್ರ್ಯೂವ್‍ನ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ 08192-259446, 6361550016, 7406323294ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಗಿರೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






GIPHY App Key not set. Please check settings